ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕಾಸರಗೋಡು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಾಭಾಗಿತ್ವದಲ್ಲಿ ಬದಿಯಡ್ಕ ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕನ್ನೆಪಾಡಿಯಲ್ಲಿ ವಿಶ್ವ ತಂಬಾಕು ದಿನದ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಖಿಲ ಕರ್ನಾಟಕ ಜನ ಜಾಗೃತಿ ನಿಕಟಪೂರ್ವ ಅಧ್ಯಕ್ಷ ಅಖಿಲೇಶ್ ನಗುಮುಗಂ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯರಾಮ ಪಾಟಾಳಿ ಪಡುಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ಸದಸ್ಯರಾದ ಹರೀಶ ಗೊಸಾಡ ತಂಬಾಕು ಸೇವನೆಯ ದುಷ್ಟಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಜಾಗೃತಿ ಸದಸ್ಯ ಶ್ಯಾಮ್ ಆಳ್ವ, ವಲಯ ಮೇಲ್ವಿಚಾರಕಿ ಸುಗುಣ ಓ ಹವಲ್ದಾರ್, ಒಕ್ಕೂಟ ಅಧ್ಯಕ್ಷೆ ಶಾರದಾ, ಸೇವಾಪ್ರತಿನಿಧಿ ಬೇಬಿ, ಒಕ್ಕೂಟ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

.jpg)
