ಲಖನೌ: ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಸಲ್ಲಿಸಿದ ಕಾಣಿಕೆಗಳ ದುರುಪಯೋಗಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಮಿತಿಯಿಂದ (ಸಿಬಿಐ) ತನಿಖೆ ನಡೆಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಾಗಿದ್ದು, ಆರೋಪ ಕುರಿತಂತೆ ತನಿಖೆ ನಡೆಸಲು ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಳಿ ಎಸ್ಐಟಿ ರಚಿಸುವಂತೆ ಟ್ರಸ್ಟ್ ಮನವಿ ಸಲ್ಲಿಸಿತ್ತು.
ಭದ್ರತಾ ಸಿಬ್ಬಂದಿಯ ನಿಗಾದ ನಡುವೆಯೇ ಕೋಟ್ಯಂತರ ರೂಪಾಯಿ ದುರುಪಯೋಗವಾಗಿರುವ ಕುರಿತಂತೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಟ್ರಸ್ಟ್ ಮನವಿ ಮಾಡಿತ್ತು.
'ಭದ್ರತಾ ವ್ಯವಸ್ಥೆ, ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ಭದ್ರತಾ ಸಿಬ್ಬಂದಿಯ ಕಾರ್ಯನಿರ್ವಹಣೆಯ ಕುರಿತಂತೆ ಎಸ್ಐಟಿಯಿಂದಲೇ ತನಿಖೆ ನಡೆಸುವ ಅಗತ್ಯವಿದೆ' ಎಂದು ಟ್ರಸ್ಟ್ ತಿಳಿಸಿತ್ತು.
ಮತ್ತೊಂದೆಡೆ, 'ಅಯೋಧ್ಯೆ ಜಿಲ್ಲೆಯ ಪಗೌಲಿ ಗ್ರಾಮದಲ್ಲಿರುವ ಲವ್ಕುಶ್ ಮಿಶ್ರಾ ಅವರ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರ ತಂಡವು ₹12 ಲಕ್ಷ ನಗದು ವಶಪಡಿಸಿಕೊಂಡಿದೆ.

