ನವದೆಹಲಿ: ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷವು ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ನಲ್ಲಿ ಕೆಲ ಮಾಹಿತಿಯನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಚುನಾವಣಾ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು. ಇದು ಪ್ರತಿಭಟನೆ ಮತ್ತು ವಿವಾದಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಜೈರಾಮ್ ರಮೇಶ್, ದೀಪಾ ದಾಸ್ ಮುನ್ಶಿ, ವಿವೇಕ್ ಟಂಖಾ, ಅಭಿಷೇಕ್ ಸಿಂಘ್ವಿ ಮತ್ತು ಮೀನಾಕ್ಷಿ ನಟರಾಜನ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ವಾದವನ್ನು ಸಲ್ಲಿಸಿದ್ದರು.

