ಕುಂಬಳೆ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ನಾಯ್ಕಾಪು ಲಿಟಲ್ ಲಿಲ್ಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 1ರಂದು ಬೆಳಗ್ಗೆ 9.30ರಿಂದ ಕನ್ನಡ ಪತ್ರಿಕಾ ದಿನಾಚರಣೆ ಮತ್ತು ಪತ್ರಿಕಾ ದಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೋಟ್ಟೆತೋಡಿ ಕಾರ್ಯಕ್ರಮ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು. ಪತ್ರಿಕಾ ವಿತರಕ ಶ್ಯಾಮಪ್ರಸಾದ್ ಎನ್. ಅವರಿಗೆ ಪತ್ರಿಕಾ ದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ ಜೆ.ಎಸ್. ಪ್ರಶಸ್ತಿ ಪ್ರದಾನ ಮಾಡುವರು.
ಹಿರಿಯ ಕವಿ, ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಪತ್ರಿಕಾ ದಿನದ ಸಂದೇಶ ನೀಡಲಿದ್ದಾರೆ. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಕೆ.ಯು.ಡಬ್ಲ್ಯೂ.ಜೆ.ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಬೆಂಗಳೂರು ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ, ಲಿಟಲ್ ಲಿಲ್ಲಿ ಶಾಲೆ ಅಧ್ಯಕ್ಷೆ ಸರಸ್ವತಿ.ಎ., ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಶ್ರೀನಾಥ್ ಪ್ರಾಸ್ತಾವಿಕವಾಗಿ ಮಾತನಾಡುವರು. ಕಾಸರಗೋಡು ಬ್ಲಾಕ್ ಪಂಚಾಯಿತಿ ಸದಸ್ಯ ಪೃಥ್ವಿರಾಜ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಉಪಾಧ್ಯಕ್ಷ ಪುರುಷೋತ್ತಮ ಪೆರ್ಲ, ಕೆ.ಯು.ಡಬ್ಲ್ಯೂ.ಜೆ. ಕಾಸರಗೋಡು ಜಿಲ್ಲಾ ಘಟಕದ ಖಜಾಂಚಿ ಅಜಿತ್ ಸ್ವರ್ಗ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ಶ್ರೀಕಾಂತ್ ನೆಟ್ಟಣಿಗೆ ಉಪಸ್ಥಿತರಿರುವರು.



