HEALTH TIPS

ಶಾಸಕರ ಸಹಿ ನಕಲಿ ಆರೋಪ: ಅಭಿಷೇಕ್ ಬ್ಯಾನರ್ಜಿಯನ್ನು ಬಂಧಿಸದಂತೆ ಕಲ್ಕತ್ತಾ ಹೈಕೋರ್ಟ್ ತಡೆ

 ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತ ನಿರ್ಣಯಕ್ಕೆ ಸಂಬಂಧಿಸಿ ಕೆಲವು ಶಾಸಕರ ಸಹಿಗಳನ್ನು ನಕಲಿ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ. 


ನ್ಯಾಯಮೂರ್ತಿ ಕೌಸಿಕ್ ಚಂದಾ ಅವರಿದ್ದ ಪೀಠವು, ಬ್ಯಾನರ್ಜಿ ಅವರು ಗುರುವಾರ ಸಂಜೆ 6 ಗಂಟೆಯೊಳಗೆ ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಸೂಚಿಸಿತು.

ಸಿಐಡಿ ಅಧಿಕಾರಿಗಳು ಕರೆದಾಗಲೆಲ್ಲ ಬ್ಯಾನರ್ಜಿ ತನಿಖೆಗೆ ಹಾಜರಾಗಿ ಸಹಕರಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದ ನಿರ್ಣಯದ ಮೇಲೆ ತಮ್ಮ ಸಹಿಗಳನ್ನು ನಕಲಿ ಮಾಡಲಾಗಿದೆ ಎಂದು ಟಿಎಂಸಿಯ ಕೆಲವು ಶಾಸಕರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ತಮ್ಮ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬ್ಯಾನರ್ಜಿ ಕಳೆದ ವಾರ ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ವೇಳೆ ಬ್ಯಾನರ್ಜಿ ಪರ ವಕೀಲರು, ತಮ್ಮ ಕಕ್ಷಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಆದ್ದರಿಂದ ಬಂಧನ ಸೇರಿದಂತೆ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡುವಂತೆ ಕೋರಿದರು.

ಈ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಬ್ಯಾನರ್ಜಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries