ನವದೆಹಲಿ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಗುಪ್ತಚರ ಸಂಪರ್ಕ ಜಾಲ (ನ್ಯಾಟ್‌ಗ್ರಿಡ್) ಕೇಂದ್ರದ ಭದ್ರತೆಗಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಕೇಂದ್ರದ ಭದ್ರತೆಗಾಗಿಯೇ ಗೃಹ ಸಚಿವಾಲಯವು 76 ಹುದ್ದೆಗಳನ್ನು ಮಂಜೂರು ಮಾಡಿದೆ ಎಂದು ಸಿಐಎಸ್‌ಎಫ್‌ನ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಕ್ಯಾಂಪಸ್ ಹೊಂದಿರುವ ನ್ಯಾಟ್‌ಗ್ರಿಡ್ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಕಾರ್ಯಾಚರಿಸುತ್ತಿರುವ ಪ್ರಮುಖ ಸಂಸ್ಥೆ. ಇದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಸಂಬಂಧಪಟ್ಟ ಮಾಹಿತಿ ಒದಗಿಸಲಿದೆ ಎಂದಿದ್ದಾರೆ.
ಭಯೋತ್ಪಾದಕ ದಾಳಿ ಹಾಗೂ ವಿಧ್ವಂಸಕ ಕೃತ್ಯಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ದೆಹಲಿಯಲ್ಲಿರುವ ಪ್ರಧಾನ ಕಚೇರಿಗೂ ಸಿಐಎಸ್‌ಎಫ್ ಭದ್ರತೆ ಒದಗಿಸಿದೆ.

