HEALTH TIPS

ಜ್ಞಾನವಿಕಾಸ ಸಂಯೋಜಕಿಯರ ಜ್ಞಾನವಿಕಾಸ ಕ್ರಿಯಾಯೋಜನೆ ಸಭೆ,

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಉಡುಪಿ ಪ್ರಾದೇಶಿಕ ವ್ಯಾಪ್ತಿಯ  ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಜ್ಞಾನವಿಕಾಸ ಸಂಯೋಜಕಿಯರ2026 -27 ನೇ ಸಾಲಿನ ಕ್ರಿಯಾಯೋಜನೆ ಸಭೆ ಕಾಸರಗೋಡಿನಲ್ಲಿ ಜರುಗಿತು. 


ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಹಾಗೂ  ಜ್ಞಾನವಿಕಾಸ ನಿರ್ದೇಶಕ ದಿನೇಶ್ ಪೂಜಾರಿ ದೀಪ ಪ್ರಜ್ಜಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ತಾಲೂಕು ಯೋಜನಾಧಿಕಾರಿ ದಿನೇಶ್.ಬಿ , ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ಯೋಜನಾಧಿಕಾರಿ  ಅಮೃತಾ, ಜ್ಞಾನವಿಕಾಸ ಸಮನ್ವಯಾಧಿಕಾರಿ   ಹಾಗೂ ತಾಲೂಕಿನ ಎಲ್ಲಾ ಜ್ಞಾನವಿಕಾಸ ಸಂಯೋಜಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ  ಒಂದು ದಿನದ ಕಾರ್ಯಗಾರ ಆಯೋಜಿಸಲಾಯಿತು.   

 ಕೇಂದ್ರ ಕಚೇರಿಯ ಜ್ಞಾನವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ  ಜ್ಞಾನವಿಕಾಸದ ಮಹತ್ವದ ಕುರಿತು ಮಾಹಿತಿ ನೀಡಿದರು.  ಕಾಸರಗೋಡು ಹಾಗೂ ಮಂಜೇಶ್ವರ  ತಾಲೂಕಿನಲ್ಲಿ ಜ್ಞಾನವಿಕಾಸ ಕೇಂದ್ರಗಳ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ಮಾಹಿತಿ ನೀಡಿದರು.

ಉಡುಪಿ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿ ಅಮೃತಾ ಅವರು ಜ್ಞಾನವಿಕಾಸ ಕ್ರಿಯಾಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ   ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸೇವಾ ಪ್ರತಿನಿಧಿಗಳು ತಮ್ಮ ಅನಿಸಿಕೆ ಮತ್ತು ಅನುಭವ ಹಂಚಿಕೊಂಡರು. ಜ್ಞಾನವಿಕಾಸ ಸಮನ್ವಯಾಧಿಕಾರಿ  ಸುನಿತಾ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಶೋಭಾ ವಂದಿಸಿದರು.    


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries