HEALTH TIPS

ಮತ್ತೊಂದು ಮೈಲಿಗಲ್ಲು ಸಾಧಿಸಿದ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆ

ಪಾಲ್ಘರ್: ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯು ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ಕಣಿವೆ ಪ್ರದೇಶದಲ್ಲಿ ಸುರಂಗ ಮಾರ್ಗವನ್ನು ಯಶಸ್ವಿಯಾಗಿ ಕೊರೆಯಲಾಗಿದೆ. 

ಇದರೊಂದಿಗೆ ಕಳೆದ ಐದು ತಿಂಗಳಲ್ಲಿ ಜಿಲ್ಲೆಯಲ್ಲಿ ಮೂರನೇ ಸುರಂಗವನ್ನು ಯಶಸ್ವಿಯಾಗಿ ಕೊರೆಯಲಾಗಿದೆ.

ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಜೂನ್ 1ರಂದು ಈ ಮಹತ್ವದ ಪ್ರಗತಿಯನ್ನು ಸಾಧಿಸಿದೆ.

ಭೌಗೋಳಿಕವಾಗಿ ಸಂಕೀರ್ಣವಾದ ಪ್ರದೇಶಗಳಲ್ಲಿ ಸುರಂಗ ಕೊರೆಯುವ ಮೂಲಕ ಯೋಜನೆಯು ಮಹತ್ವದ ಪ್ರಗತಿಯನ್ನು ಕಂಡಿದೆ. ನೂತನವಾಗಿ ಕೊರೆದ ಸುರಂಗವು 417 ಮೀಟರ್ ಉದ್ದ ಹಾಗೂ 14.4 ಮೀಟರ್ ಅಗಲವನ್ನು ಹೊಂದಿದೆ.

ಪರ್ವತ ಶ್ರೇಣಿಯ ಒಟ್ಟಾರೆ 27.4 ಕಿ.ಮೀ ಉದ್ದದ ಎಂಟು ಸುರಂಗಗಳ ಪೈಕಿ ಮಹಾರಾಷ್ಟ್ರದಲ್ಲಿ ಏಳು, ಗುಜರಾತ್‌ನಲ್ಲಿ ಒಂದು ಸುರಂಗ ಮಾರ್ಗವಿದೆ.

ಮುಂಬೈ ಮತ್ತು ಅಹಮದಾಬಾದ್ ಅನ್ನು ಸಂಪರ್ಕಿಸುವ 508 ಕಿ.ಮೀ ಉದ್ದದ ಬುಲೆಟ್ ರೈಲು ಯೋಜನೆಯು ಗುಜರಾತ್, ಮಹಾರಾಷ್ಟ್ರ ಮತ್ತು ದಾದ್ರಾ ಮತ್ತು ನಗರ ಹವೇಲಿಗಳ ಮೂಲಕ ಹಾದುಹೋಗುತ್ತದೆ. ಇದು 320 ಕಿ.ಮೀ ವೇಗದಲ್ಲಿ ಬುಲೆಟ್ ರೈಲುಗಳನ್ನು ನಿರ್ವಹಿಸಲು ವಿನ್ಯಾಸಗೊಳಿಸಲಾದ ಭಾರತದ ಏಕೈಕ ಹೈಸ್ಪೀಡ್ ರೈಲು ಯೋಜನೆಯಾಗಿದೆ .

ಈ ಯೋಜನೆಯನ್ನು ಜಪಾನ್ ಸರ್ಕಾರದ ತಾಂತ್ರಿಕ ಮತ್ತು ಆರ್ಥಿಕ ನೆರವಿನೊಂದಿಗೆ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆ ಪೂರ್ಣಗೊಂಡ ನಂತರ, ಮುಂಬೈ ಮತ್ತು ಅಹಮದಾಬಾದ್ ನಡುವಿನ ಪ್ರಯಾಣದ ಸಮಯವನ್ನು ಕೇವಲ 1 ಗಂಟೆ 58 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries