ಮಂಜೇಶ್ವರ: ವರ್ಕಾಡಿ ಪಂಚಾಯತ್ ಮಟ್ಟದ ವಿಶ್ವ ಪರಿಸರ ದಿನಾಚರಣೆ ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಉಮ್ಮರ್ ಬೋರ್ಕಳ ಉದ್ಘಾಟಿಸಿ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವರ್ಕಾಡಿ ಪಂಚಾಯತಿ ಉಪಾಧ್ಯಕ್ಷೆ ಫಾತಿಮತ್ ನಸೀಮಾ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಗ್ರಾಮ ಪಂಚಾಯತಿ ಸದಸ್ಯ ಗೋಪಾಲಕೃಷ್ಣ ಪಜ್ವ ಶುಭ ಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಹೇಳಿದರು.
ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಗಾಯತ್ರಿ, ಗೀತಾ, ಲೀಲಾ, ಅಬೂಬಕ್ಕರ್, ನಾರಾಯಣ, ಪುರುಷೋತ್ತಮ, ಹೈಯರ್ ಸೆಕೆಂಡರಿ ಪ್ರಾಂಶುಪಾಲ ವಿಜಯಕುಮಾರ್, ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ. ಬಿ ಉಪಸ್ಥಿತರಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರನ್ನು ಸ್ಮರಣೆಕೆಗಳನ್ನು ನೀಡಿ ಅಭಿನಂದಿಸಲಾಯಿತು. ಸಹಾಯಕ ಕೃಷಿ ಅಧಿಕಾರಿ ಜಯರಾಮ್ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಜ್ಞೆ ಓದುವುದರ ಮೂಲಕ ಎಲ್ಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಮಾಡಿಸಲಾಯಿತು. ವರ್ಕಾಡಿ ಕೃಷಿ ಅಧಿಕಾರಿ ಶಿವಕುಮಾರ್ ಸ್ವಾಗತಿಸಿ, ಆಶಾ ಟೀಚರ್ ವಂದಿಸಿದರು.


.jpg)
