HEALTH TIPS

ನೀಟ್-ಯುಜಿ ಪರೀಕ್ಷೆ |ರಾಷ್ಟ್ರವ್ಯಾಪಿ ಅಣಕು ಪ್ರದರ್ಶನ: ದೆಹಲಿಯಲ್ಲಿ ಬಿಗಿ ಭದ್ರತೆ

ನವದೆಹಲಿ: ನೀಟ್-ಯುಜಿ 2026ರ ಮರುಪರೀಕ್ಷೆಯನ್ನು ಸುರಕ್ಷಿತ, ಪಾರದರ್ಶಕ ಹಾಗೂ ಸುಗಮವಾಗಿ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭರದ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಶನಿವಾರ ದೇಶದಾದ್ಯಂತ ಅಣಕು ಪ್ರದರ್ಶನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿರುವ ಎನ್‌ಟಿಎ ಕಚೇರಿಯ ಸುತ್ತ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದಾಗಿದ್ದ ಈ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಜೂನ್ 21 ರಂದು ದೇಶದ 551 ನಗರಗಳು ಹಾಗೂ ವಿದೇಶದ 14 ನಗರಗಳಲ್ಲಿ ಮರು ಆಯೋಜಿಸಲಾಗಿದೆ. ದೇಶದಾದ್ಯಂತ ಸುಮಾರು 22.79 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ.

ಭಾನುವಾರ ಮಧ್ಯಾಹ್ನ 2:00 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ಸಂಜೆ 6:20 ರವರೆಗೆ ಹೆಚ್ಚುವರಿ ಸಮಯ ನೀಡಲಾಗಿದೆ.

ವಿದ್ಯಾರ್ಥಿಗಳು ಮಧ್ಯಾಹ್ನ 1:30 ರೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕು. ಮಧ್ಯಾಹ್ನ 1:30 ಕ್ಕೆ ಪರೀಕ್ಷಾ ಕೇಂದ್ರದ ಮುಖ್ಯ ಗೇಟ್‌ಗಳನ್ನು ಮುಚ್ಚಲಾಗುವುದು. ತಡವಾಗಿ ಬರುವ ಯಾವುದೇ ವಿದ್ಯಾರ್ಥಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ.

ಬಿಗಿ ಬಂದೋಬಸ್ತ್

ಪರೀಕ್ಷೆಯ ಗೋಪ್ಯ ದಾಖಲೆಗಳು ಮತ್ತು ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಪಡೆಗಳೊಂದಿಗೆ ಎನ್‌ಟಿಎ ನಿಕಟವಾಗಿ ಕೆಲಸ ಮಾಡುತ್ತಿದೆ. ಪರೀಕ್ಷಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ 674 ಸಿಟಿ ಕೋ-ಆರ್ಡಿನೇಟರ್‌ಗಳು ಮತ್ತು 6,669 ಸ್ವತಂತ್ರ ವೀಕ್ಷಕರನ್ನು ನಿಯೋಜಿಸಲಾಗಿದೆ.

ಪರೀಕ್ಷೆಯು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸೇರಿದಂತೆ 2 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries