ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ "ಭರವಸೆಯ ಬೆಳಕು (Light of Hopes) - Student Achievement Award 2026" ಹಾಗೂ "ಭರವಸೆಯ ಶಿಕ್ಷಣ ರತ್ನ (Light of Hopes - Teachers Achievement Award 2026)" ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ- ಕನ್ನಡ ಭವನ ಪ್ರಕಾಶನ, ಪ್ರಯೋಜಕತ್ವದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
2026ನೇ ಸಾಲಿನ ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಭರವಸೆ ಮೂಡಿಸಿರುವ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತ ಶಿಕ್ಷಕರಿಗೂ "ಭರವಸೆಯ ಶಿಕ್ಷಣ ರತ್ನ" ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಸಕ್ತ ಸೇವೆಯಲ್ಲಿರುವ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 15ರಂದು ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಾ. ರವೀಂದ್ರ ಜೆಪ್ಪು, ಅಧ್ಯಕ್ಷೆ ರೇಖಾ ಸುದೇಶ್ ರಾವ್ ಹಾಗೂ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುವುದು.
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಹೆಸರು, ವಿಳಾಸ ಹಾಗೂ ಭಾವಚಿತ್ರವನ್ನು ಸಲ್ಲಿಸಬೇಕು. ಶಿಕ್ಷಕರು ಹೆಸರು, ವಿಳಾಸ, ಕಾರ್ಯನಿರ್ವಹಿಸುತ್ತಿರುವ ಶಾಲೆ ಅಥವಾ ಶಿಕ್ಷಣ ಸಂಸ್ಥೆಯ ವಿವರ ಹಾಗೂ ಭಾವಚಿತ್ರವನ್ನು ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಮೊದಲು ಸಂಪೂರ್ಣ ವಿವರಗಳೊಂದಿಗೆ ಅರ್ಜಿ ಸಲ್ಲಿಸುವ 30 ಮಂದಿಯನ್ನು ಪ್ರಶಸ್ತಿ ಆಯ್ಕೆ ಸಮಿತಿ ಆಯ್ಕೆ ಮಾಡಲಿದೆ
ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ವಾಮನ್ ರಾವ್ ಬೇಕಲ್ (ಮೊ. 9037173400) ಹಾಗೂ ರೇಖಾ ಸುದೇಶ್ ರಾವ್ (ಮೊ. 9481978620) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



