ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಆಹೋರಾತ್ರಿ ಧರಣಿ ನಡೆಸಿದ್ದಾರೆ.
!['e7de0eda89e04c5a88954374efda988b62a153dadffda0db29d97844da864711.webp' failed to upload. TransportError: Error code = 7, Path = /_/BloggerUi/data/batchexecute, Message = There was an error during the transport or processing of this request., HTTP status = 0, Unknown HTTP error (HTTP Status: 0) (XHR Error Code: 6) (XHR Error Message: ' [0]')](https://www.blogger.com/img/transparent.gif)
ಶನಿವಾರ ಆರಂಭವಾದ ಪ್ರತಿಭಟನೆಯು ಭಾನುವಾರವೂ ಮುಂದುವರಿದಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತೆ ಮನವಿ ಮಾಡಿದ್ದಾರೆ.
ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ಬಳಿಕ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆಯೂ ದೀಪ್ಕೆ ಕರೆ ನೀಡಿದ್ದಾರೆ.
'ನಾವು ಕೋಟೆಗೆ ಮುತ್ತಿಗೆ ಹಾಕಿದ್ದೇೆವೆ. ನಿಮ್ಮೆಲ್ಲರ ಬೆಂಬಲವಿಲ್ಲದೆ ಈ ಚಳವಳಿ ಯಶಸ್ವಿಯಾಗುವುದಿಲ್ಲ' ಎಂದು ಹೇಳಿದ್ದಾರೆ.
ಪ್ರತಿಭಟನಕಾರರಿಗೆ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಪ್ರತಿಭಟನೆ ನಡೆಸಲು ದೆಹಲಿ ಪೊಲೀಸ್ ಅನುಮತಿ ನೀಡಿತ್ತು. ಅಲ್ಲದೆ ಸ್ಥಳ ತೆರವುಗೊಳಿಸುವಂತೆ ಇಲ್ಲವಾದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ದೆಹಲಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಅಲ್ಲಿಂದ ಕದಲದ ಪ್ರತಿಭಟನಾಕಾರರು ಧರಣಿಯಲ್ಲಿ ನಿರತರಾಗಿದ್ದಾರೆ.
ಒಂದು ವೇಳೆ ಜಂತರ್ ಮಂತರ್‌ನಿಂದ ತೆರವುಗೊಳಿಸುವುದಾದರೆ ಪ್ರತಿಭಟನೆಗೆ ಬೇರೆ ಸ್ಥಳ ನಿಗದಿ ಮಾಡುವಂತೆ ದೀಪ್ಕೆ ಒತ್ತಾಯಿಸಿದ್ದಾರೆ. ಅಲ್ಲಿಯವರೆಗೆ ಜಂತರ್ ಮಂತರ್‌ನಲ್ಲೇ ಪ್ರತಿಭಟನೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಸರಣಿ ಪೋಸ್ಟ್ ಹಾಕಿರುವ ದೀಪ್ಕೆ, ಬಲವಂತವಾಗಿ ಜನರು ಜಂತರ್ ಮಂತರ್‌ಗೆ ಬರುವುದನ್ನು ತಡೆಯಬೇಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. 'ಪ್ರತಿಭಟನಾಕಾರರು ಯಾವುದೇ ತಪ್ಪು ಮಾಡಿಲ್ಲ. ನಾವು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲು ಹೋರಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.
ಧರಣಿ ನಿರತ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯಗಳಿಗೆ ನೀರಿನ ಸರಬರಾಜು ಪುನಃಸ್ಥಾಪಿಸುವಂತೆಯೂ ಅಧಿಕಾರಿಗಳಿಗೆ ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಬೆಳಕನ್ನು ಆಫ್ ಮಾಡಲಾಗಿದೆ. ನೀರು, ಆಹಾರ ಹಾಗೂ ಶೌಚಾಲಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಆತ್ಮಹತ್ಮೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ₹1 ಕೋಟಿ ಪರಿಹಾರ ಪ್ಯಾಕೇಜ್ ನೀಡುವಂತೆಯೂ ದೀಪ್ಕೆ ಒತ್ತಾಯಿಸಿದ್ದಾರೆ.

ಅಭಿಜೀತ್ ದೀಪ್ಕೆ

