HEALTH TIPS

ಪ್ರಧಾನಿ ಮೋದಿ ದೀರ್ಘಾವಧಿ ಆಡಳಿತ: ಗುಜರಾತ್‌ನಲ್ಲಿ 'ಮಹಾ ಆರತಿ' ಸಂಭ್ರಮ

ಅಹಮದಾಬಾದ್‌: ನರೇಂದ್ರ ಮೋದಿ ಅವರು ದೇಶದ ಗಣತಂತ್ರ ವ್ಯವಸ್ಥೆಯಲ್ಲಿ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾಗುವ ಮೂಲಕ ದೀರ್ಘಾವಧಿ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾದರು.

ಈ ಐತಿಹಾಸಿಕ ಸಾಧನೆ ಅಂಗವಾಗಿ ಬುಧವಾರ ಗುಜರಾತ್‌ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಬಿಜೆಪಿ ವತಿಯಿಂದ 'ಮಹಾ ಆರತಿ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಧಾನಿ ಮೋದಿ ಅವರು ಇಂದಿಗೆ (ಜೂ.10 ಬುಧವಾರ) 4,399 ದಿನಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸುದೀರ್ಘಾವಧಿಯ (4,398 ದಿನಗಳು) ದಾಖಲೆಯನ್ನು ಮೋದಿ ಮುರಿದಿದ್ದಾರೆ.

ದೇವಸ್ಥಾನಗಳಲ್ಲಿ ವಿಶೇಷ ಪೂಜೆ...

ಇಂದು ಬೆಳಿಗ್ಗೆ ಗಾಂಧಿನಗರದಲ್ಲಿರುವ ತ್ರಿಮಂದಿರದಲ್ಲಿ ನಡೆದ ಮಹಾ ಆರತಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪಾಲ್ಗೊಂಡಿದ್ದರು. ಪ್ರಧಾನಿ ಮೋದಿ ಅವರ ಸ್ವಂತ ಮನೆಯಿರುವ ಮೆಹಸಾನಾ ಜಿಲ್ಲೆಯಲ್ಲಿರುವ ಪುರಾತನ ಹಠಕೇಶ್ವರ ಮಹಾದೇವ ದೇವಾಲಯದಲ್ಲಿ ಸಂಜೆ 7 ಗಂಟೆಗೆ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ರಾಜ್ಯದಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಈ ಅಭಿಯಾನದ ಭಾಗವಾಗಿ ಗುಜರಾತ್‌ನ ವಿವಿಧ ಜಿಲ್ಲೆಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮಹಾ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಈ ಐತಿಹಾಸಿಕ ದಿನದ ನೆನಪಿಗಾಗಿ ರಾಜ್ಯದಾದ್ಯಂತ ವಿಶೇಷ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries