HEALTH TIPS

ಶಿಕ್ಷೆಗೊಳಗಾದ ನಂತರವೂ ರಾಜಿಗೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನವದೆಹಲಿ: 'ರಾಜಿಯಾಗಬಹುದಾದ ಅಪರಾಧ ಪ್ರಕರಣಗಳಲ್ಲಿ, ಶಿಕ್ಷೆಗೊಳಗಾದ ನಂತರವೂ ಪರಿಪೂರ್ಣ ನ್ಯಾಯವನ್ನು ಪಡೆದುಕೊಳ್ಳಲು ಕಕ್ಷಿದಾರರಿಗೆ 'ರಾಜಿ ಇತ್ಯರ್ಥ'ಕ್ಕೆ ಅವಕಾಶ ನೀಡಬಹುದು' ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಪ್ರಕರಣವೊಂದರ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ.

ಕರ್ನಾಟಕದ ಮಂಡ್ಯ ಜಿಲ್ಲೆಯ ದಂಪತಿಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಅರವಿಂದ್‌ ಕುಮಾರ್‌ ಮತ್ತು ಪ್ರಸನ್ನ ಬಿ. ವರಾಲೆ ಅವರ ಪೀಠವು ಈ ಆದೇಶ ನೀಡಿದೆ. ದಂಪತಿ ನಡುವಿನ ಕಲಹ ಇತ್ಯರ್ಥಗೊಂಡು, ಶಾಂತಿಯುತವಾಗಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿರುವುದನ್ನು ಖಚಿತಪಡಿಸಿಕೊಂಡ ನ್ಯಾಯಪೀಠವು, ಪತ್ನಿ ದಾಖಲಿಸಿದ್ದ ಪ್ರಕರಣದಿಂದ ಪತಿಯನ್ನು ಖುಲಾಸೆಗೊಳಿಸಿದೆ.

'ಪರಿಪೂರ್ಣ ನ್ಯಾಯ' ಒದಗಿಸುವ ನಿಟ್ಟಿನಲ್ಲಿ ಸಂವಿಧಾನದ 142ನೇ ವಿಧಿ ಕಲ್ಪಿಸಿರುವ ಅಧಿಕಾರವನ್ನು ಚಲಾಯಿಸಿರುವುದಾಗಿ ಹೇಳಿದ ನ್ಯಾಯಪೀಠವು, 'ಕಕ್ಷಿದಾರರು ತಮ್ಮ ನಡುವಿನ ವ್ಯಾಜ್ಯವನ್ನು ಪ್ರಾಮಾಣಿಕವಾಗಿ ಬಗೆಹರಿಸಿಕೊಂಡಿದ್ದರೆ, ವೈಯಕ್ತಿಕ ಸ್ವರೂಪದ, ರಾಜಿಯಾಗಬಹುದಾದ ಅಪರಾಧ ಪ್ರಕರಣಗಳಲ್ಲಿ ಕ್ರಿಮಿನಲ್‌ ಮೊಕದ್ದಮೆಯನ್ನು ಕೊನೆಗೊಳಿಸಬಹುದು' ಎಂದು ಹೇಳಿತು.

ಪತ್ನಿ ಸಣ್ಣತಾಯಮ್ಮ ಅವರ ಮೇಲೆ ಅಪಾಯಕಾರಿ ಆಯುಧದಿಂದ ಗಂಭೀರ ಹಲ್ಲೆ ನಡೆಸಿದ ಪ್ರಕರಣದಲ್ಲಿ, ಮಂಡ್ಯದ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ಮಹದೇವಯ್ಯ ಅವರನ್ನು 2013ರಲ್ಲಿ ದೋಷಿ ಎಂದು ತೀರ್ಪು ನೀಡಿ, 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿತ್ತು. ಕರ್ನಾಟಕ ಹೈಕೋರ್ಟ್ 2025ರಲ್ಲಿ ಈ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಈ ಪ್ರಕರಣದ ಮೇಲ್ಮನವಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದಾಗ, ಮಹದೇವಯ್ಯ ಮತ್ತು ಅವರ ಪತ್ನಿ ಜಂಟಿಯಾಗಿ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ ಇದಕ್ಕೆ ಅವಕಾಶ ಕಲ್ಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries