ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ತರಗತಿಗೊಂದು ಗಿಡ ಶಾಲೆಗೊಂದು ವನ ಎಂಬ ಧ್ಯೇಯದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯರು ಶಾಲಾ ಪರಿಸರದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಪ್ರತಿನಿಧೀಕರಿಸಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತರಗತಿ ಅಧ್ಯಾಪಕರು ಮಕ್ಕಳ ಜೊತೆ ಸೇರಿ ಔಷಧೀಯ ಸಸ್ಯಗಳನ್ನು ನೆಟ್ಟು ಮಕ್ಕಳಿಗೆ ಸಸ್ಯಸಂಪತ್ತಿನ ಮಹತ್ವದ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಸರ ಸಂರಕ್ಷಣೆಯ ವಿಷಯಾಧಾರಿತ ಚಿತ್ರರಚನಾ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಪರಿಸರದ ಬಗ್ಗೆ ತಮ್ಮ ಕಾಳಜಿಯನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಪಡಿಸಿದರು. ಅಧ್ಯಾಪಕ ಗಣೇಶ್ ಆಚಾರ್ಯ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

.jpg)
.jpg)
