ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಪ್ರಸಿದ್ಧ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ, ಮುಂಬರುವ ವಾರ್ಷಿಕ ಮೇಳದ ಸಿದ್ಧತೆಗಳನ್ನು ಪರಿಶೀಲಿಸಿದರು.
ಖೀರ್ ಭವಾನಿ ಮೇಳ ಕಾಶ್ಮೀರಿ ಪಂಡಿತರ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾಗಿದೆ.
'ಮಾತಾ ಖೀರ್ ಭವಾನಿ' ಎಂದೇ ಜನಪ್ರಿಯವಾಗಿರುವ ರಾಗ್ನ್ಯಾ ದೇವಿ ದೇವಸ್ಥಾನದಲ್ಲಿ ಜೂನ್ 22ರಿಂದ ವಾರ್ಷಿಕ ಮೇಳ ನಡೆಯಲಿದೆ. ಈ ಧಾರ್ಮಿಕ ಉತ್ಸವದಲ್ಲಿ ಪಾಲ್ಗೊಳ್ಳಲು ಕಾಶ್ಮೀರಿ ಪಂಡಿತರು ಸೇರಿದಂತೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ದೇವಸ್ಥಾನಕ್ಕೆ ಭೇಟಿ ನೀಡಿದ ಒಮರ್ ಅಬ್ದುಲ್ಲಾ, ಭಕ್ತಾದಿಗಳಿಗೆ ಕಲ್ಪಿಸಲಾಗಿರುವ ವಿವಿಧ ಸೌಲಭ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ಉತ್ಸವ ಯಾವುದೇ ಅಡೆತಡೆಯಿಲ್ಲದೆ ಸುಸೂತ್ರವಾಗಿ ನಡೆಯಲು ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದರು. ಇದೇ ವೇಳೆ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

