ಕೋಲ್ಕತ್ತ: ಕಾಂಗ್ರೆಸ್ ಜೊತೆಗೆ ಟಿಎಂಸಿ ವಿಲೀನದ ಸಾಧ್ಯತೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರುತಬ್ರತಾ ಬ್ಯಾನರ್ಜಿ ತಳ್ಳಿಹಾಕಿದ್ದಾರೆ.
ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವಿಲೀನದ ಕುರಿತು ಹರಿದಾಡುತ್ತಿರುವ ವದಂತಿಗಳನ್ನು ತಳ್ಳಿಹಾಕಿದರು.
ಟಿಎಂಸಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ವಿಲೀನವಾಗುವುದಿಲ್ಲ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಮಗೆ 64 ಶಾಸಕರ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.

