ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ಇಂದು(ಜೂ.19) ಬೆಳಗ್ಗೆ 11 ರಿಂದ "ಎಕ್ಸಲೆನ್ಶಿಯಾ" ಕಾರ್ಯಕ್ರಮ ನಡೆಯಲಿದೆ. ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ಲಸ್ ಟು ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳಿಗೆ ವಿಶೇಷ ಅಭಿನಂದನೆ, ಪದವಿ ಆಕಾಂಕ್ಷಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ನಡೆಯಲಿದೆ. ಮಂಜೇಶ್ವರ ಸರ್ಕಾರಿ ಕಾಲೇಜು ಪ್ರಾಂಶುಪಾಲ ಡಾ.ಮುಹಮ್ಮದ್ ಅಲಿ ಪೆರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನನ ನೀಡಲಿದ್ದಾರೆ. ನಾಲಂದ ಕಾಲೇಜು ಪ್ರಾಂಶುಪಾಲ ಡಾ.ಮೋಹನ್ ಕುಂಟಾರ್ ಅಧ್ಯಕ್ಷತೆ ವಹಿಸುವರು. ಕಾಲೇಜು ಕಾರ್ಯನಿರ್ವಾಹಕ ಅಧಿಕಾರಿ ಡಾ.ಸತೀಶ್ ಪುಣಿಂಚಿತ್ತಾಯ, ಉಪ ಪ್ರಾಂಶುಪಾಲ ಶಂಕರ ಕೆ. ಉಪಸ್ಥಿತರಿರುವರು.


