ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗವು ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‍ಎಸ್‍ಆರ್) ಸಹಯೋಗದೊಂದಿಗೆ 12 ದಿನಗಳ ಶಿಕ್ಷಕರ ಸಬಲೀಕರಣ ಕಾರ್ಯಾಗಾರ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆರಂಭಗೊಮಡಿತು. 'ರೀ ಇಮ್ಯಾಜಿನಿಂಗ್ ಸೋಶಿಯಲ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್ ತ್ರೂ ಜನರೇಟಿವ್ ಎಐ' ಎಂಬ ಶೀರ್ಷಿಕೆಯೊಂದಿಗೆ ಕಾರ್ಯಾಗಾರ ಪ್ರಾರಂಭಿಸಲಾಗಿದೆ.
ವಿಶ್ವವಿದೈಆಲಯ ಉಪಕುಲಪತಿ ಪೆÇ್ರ. ಸಿದ್ದು ಪಿ. ಅಲ್ಗೂರ್ ಕಾರ್ಯಾಗಾರ ಉದ್ಘಾಟಿಸಿದರು. ಪ್ರಪಂಚದ ಎಲ್ಲಾ ಮಾಹಿತಿಯೂ ಇಂದು ಬೆರಳ ತುದಿಯಲ್ಲಿ ಲಭ್ಯವಿರುವ ಯುಗವಾಗಿದೆ. ಕೃತಕ ಬುದ್ಧಿಮತ್ತೆಯು ಬೋಧನೆ ಮತ್ತು ಕಲಿಕೆಯ ವಿಧಾನಗಳನ್ನು ಬದಲಾಯಿಸುತ್ತಿದ್ದು, ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಶಿಕ್ಷಕರು ತಮ್ಮ ವೃತ್ತಿಯಲ್ಲಿ ಮತ್ತಷ್ಟು ಮುಂದುವರಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಡೀನ್ ಅಕಾಡೆಮಿಕ್ ಪೆÇ್ರ. ಜೋಸೆಫ್ ಕೊಯಿಪಲ್ಲಿ, ರಾಷ್ಟ್ರೀಯ ಸಂಸ್ಥೆ ಶೈಕ್ಷಣಿಕ ಯೋಜನೆ ಮತ್ತು ಆಡಳಿತದ ಐಸಿಟಿ ಮತ್ತು ಯೋಜನಾ ನಿರ್ವಹಣಾ ಘಟಕದ ಮುಖ್ಯಸ್ಥ ಪೆÇ್ರ. ಕೆ. ಶ್ರೀನಿವಾಸ್, ಶಿಕ್ಷಣ ವಿಭಾಗದ ಮುಖ್ಯಸ್ಥೆ ಪೆÇ್ರ. ವಿ.ಪಿ. ಜೋಶಿತ್ ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ಮೇರಿ ವಿನೀತಾ ಥಾಮಸ್ ಉಪಸ್ಥಿತರಿದ್ದರು. ಕಾರ್ಯಾಗಾರ ಜೂ. 20ರಂದು ಸಂಪನ್ನಗೊಳ್ಳಲಿದೆ.



