HEALTH TIPS

ಅಮೆರಿಕ-ಇರಾನ್‌ ಒಪ್ಪಂದಕ್ಕೆ ಟ್ರಂಪ್-ಮಸೂದ್‌ ಸಹಿ: ಮ್ಯಾಕ್ರನ್ ಮೆಚ್ಚುಗೆ

 ವರ್ಸೈಲ್ಸ್ : ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಒಪ್ಪಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್ ಅವರು ಸಹಿ ಹಾಕಿರುವುದನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸ್ವಾಗತಿಸಿದ್ದಾರೆ. 


'ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ವರ್ಸೈಲ್ಸ್‌ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದವು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುತ್ತದೆ ಮತ್ತು ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಅನುವು ಮಾಡಿಕೊಡುತ್ತದೆ. ಇದು ಸರಿಯಾದ ದಿಕ್ಕಿನಲ್ಲಿ ಇಟ್ಟ ಪ್ರಮುಖ ಹೆಜ್ಜೆಯಾಗಿದ್ದು, ಶೀಘ್ರದಲ್ಲೇ ಇಂಧನ ಬೆಲೆಗಳ ಇಳಿಕೆಗೆ ಕಾರಣವಾಗಲಿದೆ' ಎಂದು ಮ್ಯಾಕ್ರನ್ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮ್ಯಾಕ್ರನ್ ಸಮ್ಮುಖದಲ್ಲಿ ಟ್ರಂಪ್ ಅವರು ದಾಖಲೆಗೆ ಸಹಿ ಹಾಕುತ್ತಿರುವ ವಿಡಿಯೊವನ್ನು ಶ್ವೇತಭವನವು ಹಂಚಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫ್ರಾನ್ಸ್‌ನ ವರ್ಸೈಲ್ಸ್‌ನಲ್ಲಿ ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿಸಿದೆ.

ಈ ಒಪ್ಪಂದವು ಅಮೆರಿಕ ಮತ್ತು ಇರಾನ್ ನಡುವಿನ ಅತ್ಯಂತ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯನ್ನು ಸೂಚಿಸುತ್ತದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ 14 ಅಂಶಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಸೇನಾ ಕಾರ್ಯಾಚರಣೆ ಅಂತ್ಯ, ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸುವುದು, ಆರ್ಥಿಕ ನಿರ್ಬಂಧನೆಗಳ ತೆರವು, ಇರಾನ್‌ನ ಪರಮಾಣು ಯೋಜನೆ ಕುರಿತು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು 60 ದಿನಗಳ ಪ್ರಕ್ರಿಯೆಯನ್ನು ಪ್ರಾರಂಭಿಸುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries