ವಾಷಿಂಗ್ಟನ್: ಇರಾನ್ ಜೊತೆಗಿನ ಕದನವಿರಾಮ ಮಾತುಕತೆಯು ಬಹುತೇಕ ಪೂರ್ಣಗೊಂಡಿದ್ದು, ಈ ವಾರಾಂತ್ಯದಲ್ಲಿ ಸಹಿ ಹಾಕುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಹೇಳಿದ್ದಾರೆ.
ಇರಾನ್‌ನಲ್ಲಿರುವ ತೈಲ ನಿಕ್ಷೇಪಗಳನ್ನು ನಿಯಂತ್ರಣಕ್ಕೆ ಪಡೆಯುತ್ತೇವೆ ಎಂದು ಟ್ರಂಪ್ ಬೆದರಿಕೆ ಹಾಕಿದ ಕೆಲವೇ ಗಂಟೆಗಳ ನಂತರ, ಅಮೆರಿಕವು ಪಶ್ಚಿಮ ಏಷ್ಯಾದಲ್ಲಿನ ಮಿಲಿಟರಿ ದಾಳಿಗಳನ್ನು ನಿಲ್ಲಿಸಿದೆ.
ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, 'ಇರಾನ್ ಮತ್ತೆ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದುವುದಿಲ್ಲ ಎಂದು ಒಪ್ಪಿಕೊಂಡಿದೆ. ಇದನ್ನು ಸಾಧಿಸುವುದೇ ನಮ್ಮ ಉದ್ದೇಶವಾಗಿತ್ತು. ಹಾಗಾಗಿ, ಅಮೆರಿಕವು ಇರಾನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸಿದೆ' ಎಂದು ಹೇಳಿದ್ದಾರೆ.
ಈ ವಾರಾಂತ್ಯದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಯುರೋಪಿನಲ್ಲಿ ಎರಡೂ ದೇಶಗಳು ಸಹಿ ಹಾಕಲಿವೆ. ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಅಮೆರಿಕದ ಪರವಾಗಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ಹೇಳಿದ್ದಾರೆ.
ಇರಾನ್‌ನೊಂದಿಗಿನ ಕದನವಿರಾಮದ ಕುರಿತು ಕತಾರ್, ಯುಎಇ, ಸೌದಿ ಅರೇಬಿಯಾ, ಬಹ್ರೇನ್, ಕುವೈತ್ ಮತ್ತು ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

