ನವದೆಹಲಿ: ರಾಜ್ಯಸಭೆ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ನ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಅತುಲ್ ಎಸ್.ಚಂದೂರ್ಕರ್ ಅವರಿದ್ದ ಪೀಠ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿತು.
ಸಂವಿಧಾನದ 329ನೇ ವಿಧಿಯಡಿ ಈ ಅರ್ಜಿಯನ್ನು ಪುರಸ್ಕರಿಸಲಾಗದು ಎಂದು ಕೋರ್ಟ್ ಹೇಳಿದೆ.
ಒಂದು ವೇಳೆ ವಿಚಾರಣೆಗೆ ಒಪ್ಪಿಕೊಂಡಿದ್ದೇ ಆದಲ್ಲಿ 329ನೇ ವಿಧಿಯಲ್ಲಿ ಇಲ್ಲದಿರುವ ಯಾವುದೋ ತತ್ವವನ್ನು ಅದರಲ್ಲಿ ಸೇರಿಸಿದಂತಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಸಂವಿಧಾನದ 329ನೇ ವಿಧಿ ಪ್ರಕಾರ ಚುನಾವಣಾ ಪ್ರಕ್ರಿಯೆಗಳು ನ್ಯಾಯಾಂಗದ ಹಸ್ತಕ್ಷೇಪದಿಂದ ವಿಳಂಬವಾಗದೆ, ಕೃತ್ಯ ಸಮಯಕ್ಕೆ ನಡೆಯುವುದನ್ನು ಖಚಿತಪಡಿಸಿಕೊಳ್ಳಲು, ಚುನಾವಣಾ ವಿಷಯಗಳಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶಿಸುವುದನ್ನು ತಡೆಯುತ್ತದೆ.
ಚುನಾವಣಾಧಿಕಾರಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಳಿಸಿರುವುದರಿಂದ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದೊಂದೇ ಏಕೈಕ ದಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

