HEALTH TIPS

ಮಧ್ಯಪ್ರಾಚ್ಯ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಅಪಾಯ: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಎಚ್ಚರಿಕೆ

 ವಿಶ್ವಸಂಸ್ಥೆ : ಮಧ್ಯಪ್ರಾಚ್ಯವು ಆಳವಾದ ಬಿಕ್ಕಟ್ಟಿನತ್ತ ಸಾಗುತ್ತಿದ್ದು, ಅದರ ಪರಿಣಾಮ ಆ ಪ್ರದೇಶವನ್ನು ಮೀರಿ ಜಗತ್ತಿನ ಇತರ ಭಾಗಗಳ ಮೇಲೆಯೂ ಬೀಳಲಿವೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಎಚ್ಚರಿಸಿದ್ದಾರೆ. 


ಈ ಕುರಿತು ಸಾಮಾಜಿಕ ಜಾಲತಾಣ ಘಿ ನಲ್ಲಿ ಪ್ರತಿಕ್ರಿಯಿಸಿರುವ ಅವರು, 'ಮಧ್ಯಪ್ರಾಚ್ಯವು ಮತ್ತಷ್ಟು ಬಿಕ್ಕಟ್ಟಿಗೆ ಸಿಲುಕುತ್ತಿದೆ.

ಇದರ ಪರಿಣಾಮಗಳು ಪ್ರದೇಶದ ಗಡಿಗಳನ್ನು ಮೀರಿ ವಿಸ್ತರಿಸುತ್ತಿವೆ' ಎಂದು ಹೇಳಿದ್ದಾರೆ.

'ಈ ವಾರ ನಡೆದ ವ್ಯಾಪಕ ದಾಳಿಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿವೆ. ಕದನ ವಿರಾಮ ಜಾರಿಯಲ್ಲಿದ್ದರೂ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದೆ' ಎಂದು ತಿಳಿಸಿದ್ದಾರೆ.

'ಈಗಿನ ಉದ್ವಿಗ್ನತೆಯು ಪೂರ್ಣ ಪ್ರಮಾಣದ ಸಂಘರ್ಷಕ್ಕೆ ತಿರುಗುವ ಅಪಾಯವನ್ನು ನಾವು ನಿರ್ಲಕ್ಷಿಸಬಾರದು' ಎಂದು ಗುಟೆರೆಸ್ ಹೇಳಿದ್ದಾರೆ.

ಎಲ್ಲ ಸಂಬಂಧಿತ ಪಕ್ಷಗಳು ರಾಜತಾಂತ್ರಿಕ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿರುವ ಅವರು, 'ಇನ್ನು ಮುಂದೆ ದಾಳಿಗಳು ನಡೆಯಬಾರದು. ಹಿಂಸಾಚಾರಕ್ಕೆ ಅವಕಾಶ ನೀಡಬಾರದು' ಎಂದು ಹೇಳಿದ್ದಾರೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries