ಸಮರಸ ಚಿತ್ರಸುದ್ದಿ: ಮಧೂರು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇಗುಲಕ್ಕೆ ಮಲಬಾರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಓ.ಕೆ ವಾಸು ಅವರು ಬುಧವಾರ ಭೇಟಿ ನೀಡಿ, ದೇಗುಲದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ದೇಗುಲದ ಪರವಾಗಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಟಿ.ರಾಜೇಶ್ ಅವರು ಓ.ಕೆ ವಾಸು ಅವರನ್ನು ಶಾಲುಹೊದಿಸಿ, ಸ್ಮರಣಿಕೆ ಹಾಗೂ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.


