HEALTH TIPS

ಭವಾನಿಪುರ ಕ್ಷೇತ್ರ ಚುನಾವಣಾ ಫಲಿತಾಂಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮಮತಾ

 ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಕಲ್ಕತ್ತ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. 


ಹಾಲಿ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮಮತಾ ಅವರು 15,105 ಮತಗಳ ಅಂತರದಿಂದ ಅವರು ಸೋಲು ಅನುಭವಿಸಿದ್ದರು.

ಫಲಿತಾಂಶ ಪ್ರಶ್ನಿಸುವ ಅರ್ಜಿಯನ್ನು ದೃಢೀಕರಿಸಲು ಅವರು ಹೈಕೋರ್ಟ್‌ ರಿಜಿಸ್ಟ್ರಿಗೆ ತೆರಳಿದ್ದರು ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಹೈಕೋರ್ಟ್‌ ಆವರಣದಿಂದ ಹೊರಬಂದ ವೇಳೆ ಪತ್ರಕರ್ತರ ಪ್ರಶ್ನೆಗೆ ಮಮತಾ ಉತ್ತರಿಸಲಿಲ್ಲ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಇದೇ ಮೇ 4ರಂದು ನಡೆದಿತ್ತು. ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ನಂತರ ಸುವೇಂದು ಅಧಿಕಾರಿ ಅವರು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

2021ರ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ವಿರುದ್ಧ ಸೋತಿದ್ದ ಮಮತಾ, ಆಗಲೂ ಫಲಿತಾಂಶವನ್ನು ಪ್ರಶ್ನಿಸಿ ಚುನಾವಣಾ ಅರ್ಜಿಯನ್ನು ಸಲ್ಲಿಸಿದ್ದರು. ಈ ವಿಷಯವನ್ನು ಈಗಲೂ ಕಲ್ಕತ್ತ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries