HEALTH TIPS

ತುರ್ತು ಪರಿಸ್ಥಿತಿ | ದೇಶದ ಇತಿಹಾಸದ ಕರಾಳ ಅಧ್ಯಾಯ: ಸಿ.ಪಿ. ರಾಧಾಕೃಷ್ಣನ್

ನವದೆಹಲಿ (PTI): 'ತುರ್ತು ಪರಿಸ್ಥಿತಿಯು ಭಾರತದ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದು' ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಗುರುವಾರ ಬಣ್ಣಿಸಿದ್ದಾರೆ. ಅಲ್ಲದೇ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ನಿಂತವರಿಗೆ ಗೌರವ ಸಲ್ಲಿಸಿದರು.

'ತುರ್ತು ಪರಿಸ್ಥಿತಿಯು ಸಾಂವಿಧಾನಿಕ ಮೌಲ್ಯಗಳನ್ನು ಪರೀಕ್ಷಿಸಿದ ಸಮಯವನ್ನು ನೆನಪಿಸುತ್ತದೆ.

ನಾಗರಿಕರ ಸ್ವಾತಂತ್ರ್ಯಗಳನ್ನು ಅಮಾನತುಗೊಳಿಸಲಾಯಿತು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಯಿತು, ಪ್ರಜಾಪ್ರಭುತ್ವ ಚೌಕಟ್ಟಿನ ಕೇಂದ್ರಬಿಂದುವಾಗಿರುವ ಸಂಸ್ಥೆಗಳನ್ನು ದುರ್ಬಲಗೊಳಿಸಲಾಯಿತು' ಎಂದು ರಾಧಾಕೃಷ್ಣನ್ ಅವರು 'ಎಕ್ಸ್‌'ನಲ್ಲಿ ತಿಳಿಸಿದ್ದಾರೆ.

'ಸಂವಿಧಾನದ ಆದರ್ಶಗಳಿಗೆ ಬದ್ಧರಾಗಿರಿ ಮತ್ತು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹಾದಿಯಲ್ಲಿ ಸದೃಢ ಭಾರತವನ್ನು ನಿರ್ಮಿಸಿ' ಎಂದು ಅವರು ಜನರಿಗೆ ಒತ್ತಾಯಿಸಿದರು.

ಸಂವಿಧಾನದ 352ನೇ ವಿಧಿ ಅಡಿಯಲ್ಲಿ 1975ರ ಜೂನ್‌ 25ರಿಂದ 1977ರ ಮಾರ್ಚ್‌ 21ರವರೆಗೆ ಭಾರತದಲ್ಲಿ ತುರ್ತುಪರಿಸ್ಥಿತಿ ಹೇರಲಾಗಿತ್ತು. ಕಾರ್ಯಾಂಗಕ್ಕೆ ಹೆಚ್ಚಿನ ಅಧಿಕಾರ ನೀಡಿ, ರಾಜ್ಯದ ಅಧಿಕಾರವನ್ನು ನಿಯಂತ್ರಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜೂನ್‌ 25 ಅನ್ನು 'ಸಂವಿಧಾನ ಹತ್ಯಾ ದಿವಸ್‌' (ಸಂವಿಧಾನದ ಹತ್ಯೆಯ ದಿನ) ಎಂದು ಘೋಷಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries