ಕಾಸರಗೋಡು: ಉಕ್ಕಿನಡ್ಕದ ಕಾಸರಗೋಡು ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಮತ್ತು ವೈದ್ಯಕೀಯ ಕಾಲೇಜಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹೊಸ ಆಡಳಿತ ಬ್ಲಾಕ್ ಮತ್ತು ಸೀವೇಜ್ ಸ್ಥಾವರ ಹೊಸದಾಗಿ ಪ್ರಾರಂಭಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಲ್ಲಟ್ರ ಮಾಹಿನ್ ತಿಳಿಸಿದರು. ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ನೇತೃತ್ವದಲ್ಲಿ ಕಾಸರಗೋಡು ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಮಾಸಿಕ ಪರಿಶೀಲನೆ ಸಂದರ್ಭ ಶಾಸಕರು ಈ ವಿಷಯ ತಿಳಿಸಿದರು.
ಎಂಡೋಸಲ್ಫಾನ್ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನರರೋಗ ವಿಭಾಗದ ಹೆಚ್ಚಿನ ಪ್ರಯೋಜನ ಲಭ್ಯವಾಗಿಸುವುದು, ಅಸೋಸಿಯೇಟ್ ಪೆÇ್ರಫೆಸರ್ ಸೇರಿದಂತೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗೆ ಅಗತ್ಯ ಹುದ್ದೆಗಳನ್ನು ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಕಾಸರಗೋಡು ವೈದ್ಯಕೀಯ ಕಾಲೇಜಿನ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಕಾಲೇಜಿನ ಆಂತರಿಕ ರಸ್ತೆಗಳು ಮತ್ತು ಆಸ್ಪತ್ರೆ ಕಟ್ಟಡಗಳ ಕಾಮಗಾರಿಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.
ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಎ.ಅರುಣ್ಕುಮಾರ್, ಉಪ ಪ್ರಾಂಶುಪಾಲ ಪಿ.ಜಿ. ಸಿಂಧು, ವೈದ್ಯಕೀಯ ಕಾಲೇಜು ಅಧೀಕ್ಷಕ ಡಾ. ಪ್ರವೀಣ್, ನಸಿರ್ಂಗ್ ಕಾಲೇಜು ಉಪ ಪ್ರಾಂಶುಪಾಲೆ ಶೋಭಾ, ಸಹಾಯಕ ಜಿಲ್ಲಾಧಿಕಾರಿ ಲಿಪು ಎಸ್ ಲಾರೆನ್ಸ್, ಕೇರಳ ಜಲ ಪ್ರಾಧಿಕಾರ ಕೆಎಸ್ಇಬಿ, ಪಿಡಬ್ಲ್ಯೂಡಿ, ಕೆಐಟಿ ಕಂಪನಿ ಮತ್ತು ಯುಎಲ್ಸಿಸಿ ಹಾರ್ಬರ್ ಎಂಜಿನಿಯರಿಂಗ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.



