ನವದೆಹಲಿ: ನಿಗದಿತ ಪಾದಚಾರಿ ಮಾರ್ಗದಲ್ಲಿ ನಡೆದಾಡುವುದು ಸಂವಿಧಾನದ ಅನ್ವಯ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.
ಶಾಲೆಗೆ ಕರೆದೊಯ್ಯುವಾಗ ತಂದೆಯೊಬ್ಬರು ತಮ್ಮ ಐದು ವರ್ಷದ ಮಗನನ್ನು ಕಳೆದುಕೊಂಡ ದುರದೃಷ್ಟಕರ ಮೋಟಾರು ಅಪಘಾತ ಪರಿಹಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.
ಮೋಟಾರು ವಾಹನಗಳ ಚಲನೆಗಿಂತ ನಾಗರಿಕರ ಮೂಲಭೂತ ಹಕ್ಕುಗಳಿಗೆ ಪ್ರಥಮ ಆದ್ಯತೆಯಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

