ಕಾಸರಗೋಡು : ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ 2009 ರಿಂದ 2015 ರವರೆಗೆ ಭದ್ರತೆ ಮತ್ತು ಇತರ ವಿಭಾಗಗಳಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡಿದವರು ಇಪಿಎಫ್ ಪ್ರಯೋಜನ ಪಡೆಯಲು ದಾಖಲೆಗಳನ್ನು ಸಲ್ಲಿಸಬೇಕು. ಯುಎಎನ್ ಸಂಖ್ಯೆ, ಆಧಾರ್ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ಜೂನ್ 20 ರ ಮೊದಲು ರಿಜಿಸ್ಟ್ರಾರ್ ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದೊಳಗೆ ದಾಖಲೆಗಳನ್ನು ಸಲ್ಲಿಸದವರಿಗೆ ನಂತರ ಅವಕಾಶವಿರುವುದಿಲ್ಲ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(0467 2309482)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

