ನವದೆಹಲಿ (PTI): ದೇಶದಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿರುವ ಕಾರಣ, ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ, ದೇಹದಲ್ಲಿ ನೀರಿನ ಅಂಶ ಹೆಚ್ಚಾಗಿರುವಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಲಹೆ ನೀಡಿದ್ದಾರೆ.
'ಮನದ ಮಾತು' ಬಾನುಲಿ ಕಾರ್ಯಕ್ರಮ ದಲ್ಲಿ ಮಾತನಾಡಿ, 'ಬಿಸಿಲಿನಲ್ಲಿ ಹೊರಗೆ ಹೋಗುವುದಿದ್ದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ. ಪದೇ ಪದೇ ನೀರು ಕುಡಿಯುತ್ತೀರಿ.
ಜತೆಗೆ ಬಿಸಿಲ ಬೇಗೆಗೆ ಸಂಬಂಧಿಸಿದಂತೆ ಆಯಾ ರಾಜ್ಯ ಸರ್ಕಾರ ಗಳು, ಇಲಾಖೆಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ' ಎಂದೂ ಹೇಳಿದ್ದಾರೆ.

