HEALTH TIPS

ನಾಳೆ ಪೆರಡಾಲದಲ್ಲಿ ಮಹಾರುದ್ರಯಾಗ, ದೃಢಕಲಶ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ಜರಗಿದ್ದು, ದೃಢಕಲಶವು ಜೂನ್ 09 ರಂದು ಮಂಗಳವಾರ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಜೂ.8 ಸೋಮವಾರ ಸಂಜೆ 7ಕ್ಕೆ ಪುಣ್ಯಾಹವಾಚನ,  ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ. 


ನಾಳೆ ಪ್ರಾತಃಕಾಲ 7ಕ್ಕೆ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, 9.30ಕ್ಕೆ ಶ್ರೀ ಮಹಾರುದ್ರಯಾಗ ಆರಂಭ, ಮಧ್ಯಾಹ್ನ 12ಕ್ಕೆ ಶ್ರೀ ಮಹಾರುದ್ರಯಾಗ ಪೂರ್ಣಾಹುತಿ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಭೋಜನ ಪ್ರಸಾದ. ಅಪರಾಹ್ನ 2.30ಕ್ಕೆ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ವಸಂತ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲಗುತ್ತು, ಗೌರವಾಧ್ಯಕ್ಷ ಜಯದೇವ ಖಂಡಿಗೆ, ಮೊಕ್ತೇಸರರುಗಳಾದ ಸೀತಾರಾಮ ನವಕಾನ, ಕೃಷ್ಣ ಬದಿಯಡ್ಕ, ಕೋಶಾಧಿಕಾರಿ ಸೂರ್ಯನಾರಾಯಣ ಬಿ., ರಕ್ಷಾಧಿಕಾರಿ ಕೃಷ್ಣಮೂರ್ತಿ ಪುದುಕೋಳಿ, ಕೊಡ್ಯಮೆ ಅರಮನೆಯ ಕೃಷ್ಣರಾಜ ಬಲ್ಲಾಳ್ ಗೌರವ ಉಪಸ್ಥಿತರಿರುವರು. ರಾತ್ರಿ 7.30ಕ್ಕೆ ಶ್ರೀದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಭೋಜನ ಪ್ರಸಾದ ನಡೆಯಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries