HEALTH TIPS

ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ ವಾಗ್ದಾಳಿ

 ಸೂರತ್/ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾದ ಕೆಲವೇ ದಿನಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. 


ಸೂರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಅಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಗಿ ಬಂದಿತು ಎಂದು ಅವರು ಹೇಳಿದ್ದಾರೆ.

ಕಳೆದ 12 ವರ್ಷಗಳಿಂದ ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದೆ. ಆದರೆ ದೇಶದ ಜನರು ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದಿದ್ದಾರೆ.

ಇದೇ ವೇಳೆ 'ಆತ್ಮನಿರ್ಭರ ಭಾರತ' ಯೋಜನೆಯನ್ನು ಲೇವಡಿ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕೆಲವು ನಿರಾಶಾವಾದಿಗಳಿದ್ದಾರೆ, ಅವರು ಸದಾ 'ಆತ್ಮನಿರ್ಭರ ಭಾರತ' ಉಪಕ್ರಮವನ್ನು ಅಪಹಾಸ್ಯ ಮಾಡುತ್ತಾರೆ. ಈ ರಾಷ್ಟ್ರೀಯ ಸಂಕಲ್ಪವನ್ನು ಅವರು ನಿರಂತರವಾಗಿ ಕೀಳಾಗಿ ಕಾಣುತ್ತಿದ್ದಾರೆ. ಇವರೇ ಭಾರತವನ್ನು ಯಾವಾಗಲೂ ಇತರ ದೇಶಗಳ ಮೇಲೆ ಅವಲಂಬಿತವಾಗಿರುವಂತೆ ಮಾಡಿದವರು ಎಂದು ಕುಟುಕಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries