ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿನ ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ನಿರ್ಮಿತ ನೌಕಾಪಡೆಯ ಮೂರು ಹಡಗುಗಳನ್ನು ಲೋಕಾರ್ಪಣೆ ಮಾಡಿದರು.
ದೇಶೀಯವಾಗಿ ನಿರ್ಮಿತ ರಹಸ್ಯ ಸಾಮರ್ಥ್ಯದ 'ದುನಾಗಿರಿ', ಸರ್ವೇಕ್ಷಣಾ ಹಡಗು 'ಸಂಶೋಧಕ್' ಹಾಗೂ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'ಅಗ್ರೇ' ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿತು.
ಹೊಸ ಹಡಗುಗಳ ಸೇರ್ಪಡೆಯು ಸಾಗರಯಾನ ಭದ್ರತೆಯಲ್ಲಿ ಭಾರತದ ಸಾಮರ್ಥ್ಯವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.
ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ, ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಭಾರತೀಯ ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಉಪಸ್ಥಿತರಿದ್ದರು.
ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯುರೋ ಈ ಹಡಗುಗಳನ್ನು ವಿನ್ಯಾಸಗೊಳಿಸಿದ್ದು, ಕೋಲ್ಕತ್ತ ಮೂಲಕ ಪಿಎಸ್‌ಯು ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ ಹಾಗೂ ಎಂಜಿನಿಯರ್ಸ್ ಲಿಮಿಟೆಡ್ ನಿರ್ಮಿಸಿದೆ.

