ಬ್ರಸೀಲಿಯಾ: ಬ್ರೆಝಿಲ್ ನ ರಿಯೋ ಡಿ ಜನೈರೊದಲ್ಲಿ ಎರಡು ಹೆಲಿಕಾಪ್ಟರ್‌ಗಳು ಗಗನದಲ್ಲೇ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಬ್ರೆಝಿಲ್ ನ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಎರಡು ಹೆಲಿಕಾಪ್ಟರ್ ಗಳು ಬೆಳಿಗ್ಗೆ ರೆಕ್ರೆಯೊ ಡೊಸ್ ಬಂದೇರಾಂಟೆಸ್ ಪ್ರದೇಶದಲ್ಲಿ ಗಗನದಲ್ಲೇ ಪರಸ್ಪರ ಡಿಕ್ಕಿ ಹೊಡೆದು, ಎಲೆಕ್ಟ್ರಿಕ್ ಕಾರು ಡೀಲರ್‌ಶಿಪ್ ನ ಪಾರ್ಕಿಂಗ್ ಸ್ಥಳಕ್ಕೆ ಅಪ್ಪಳಿಸಿವೆ.
ಇದರಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20 ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಕನಿಷ್ಠ ಆರು ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತರೆಲ್ಲರೂ ಅಪಘಾತಕ್ಕೊಳಗಾದ ಹೆಲಿಕಾಪ್ಟರ್ ಗಳ ಸಿಬ್ಬಂದಿಯಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

