HEALTH TIPS

CJP ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಹಲ್ಲೆ ನಡೆಸಿದ್ದ ಆರೋಪಿಗಳ ಬಿಡುಗಡೆ: ಮಾಲಾರ್ಪಣೆ ಮಾಡಿ ಸ್ವಾಗತ

 ಜೈಪುರ: ಜೈಪುರದಲ್ಲಿ ನಡೆದ ಪ್ರತಿಭಟನೆಯ ವೇಳೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಕಪಾಳ ಮೋಕ್ಷ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಿಡುಗಡೆಗೊಳಿಸಿದ್ದು, ಅವರ ಬೆಂಬಲಿಗರು ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 


ರಾಜಸ್ಥಾನದ ಜೈಪುರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಇಬ್ಬರು ಕಪಾಳ ಮೋಕ್ಷ ನಡೆಸಿದ ಘಟನೆಯ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.

ಬೋಸ್ಟನ್ ನಿಂದ ಮರಳಿದ್ದ ಅಭಿಜೀತ್ ದೀಪ್ಕೆ ಮೇಲೆ ನಡೆದ ದಾಳಿಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಈ ಘಟನೆಯ ಸಂಬಂಧ ಬಂಧಿತರಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಿಡುಗಡೆಗೊಳಿಸಿದ ಬಳಿಕ, ಅವರ ಬೆಂಬಲಿಗರು 'ಇಂಕಿಲಾಬ್ ಝಿಂದಾಬಾದ್', 'ಭಾರತ್ ಮಾತಾ ಕಿ ಜೈ' ಎಂಬ ಘೋಷಣೆಗಳನ್ನು ಕೂಗುತ್ತಾ, ಅವರಿಗೆ ಮಾಲಾರ್ಪಣೆ ಮಾಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ನಡುವೆ, ತಮ್ಮ ಮೇಲಿನ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಅಭಿಜೀತ್ ದೀಪ್ಕೆ, ಇಂತಹ ದಾಳಿಗಳಿಂದ ನನ್ನನ್ನು ಬೆದರಿಸಲು ಸಾಧ್ಯವಿಲ್ಲ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ಕುರಿತು ಧ್ವನಿ ಎತ್ತುವುದನ್ನು ನಾನು ಮುಂದುವರಿಸುತ್ತೇನೆ ಎಂದು ಘೋಷಿಸಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries