HEALTH TIPS

ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಹೈದರಾಬಾದ್‌ನಲ್ಲಿ CJP ಕಾರ್ಯಕರ್ತರ ಪ್ರತಿಭಟನೆ

 ಹೈದರಾಬಾದ್‌: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಇನ್ನಿತರ ಸಂಘಟನೆಗಳ ಸದಸ್ಯರು ಭಾನುವಾರ ಇಲ್ಲಿ ಪ್ರತಿಭಟನೆ ನಡೆಸಿದರು. ‌


ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಆನ್ ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಧರಣಾ ಚೌಕ್‌ನಲ್ಲಿ ಜಮಾಯಿಸಿದ್ದ ಪ್ರತಿಭಟನಕಾರರು ಕೇಂದ್ರದಲ್ಲಿನ ಎನ್‌ಡಿಎ ಸರ್ಕಾರ ವಿರುದ್ಧ ಘೋಷಣೆಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಕಾರರನ್ನು ಉದ್ದೇಶಿಸಿ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚೂಕ್ ಮಾತನಾಡಿ,' ರಾಜಕೀಯದ ಅಧಿಕಾರಕ್ಕಾಗಿಯೋ ಅಥವಾ ಯಾವುದೇ ರಾಜಕೀಯ ಸಂಘಟನೆಗಳಿಗೆ ಸವಾಲೆಸೆಯಲು ಈ ಪ್ರತಿಭಟನೆ ನಡೆಸುತ್ತಿಲ್ಲ. ಜನರಲ್ಲಿ ಜಾಗೃತಿ ಮೂಡಿಸಲು, ನಾಗರಿಕರ ಹಕ್ಕುಗಳನ್ನು ರಕ್ಷಿಸಲು, ದೇಶದಲ್ಲಿ ಆಗುತ್ತಿರುವ ತಪ್ಪುಗಳನ್ನು ತಿದ್ದಲು ಈ ಪ್ರತಿಭಟನೆ ನಡೆಸಲಾಗುತ್ತಿದೆ' ಎಂದಿದ್ದಾರೆ.

ಜತೆಗೆ ಈ ವ್ಯವಸ್ಥಿತ ಲೋಪದೋಷಗಳ ಹೊಣೆಯನ್ನು ಮೋದಿ ನೇತೃತ್ವದ ಸರ್ಕಾರ ಹೊತ್ತುಕೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries