ನವದೆಹಲಿ: ದಕ್ಷಿಣ ದಿಲ್ಲಿಯ ಮಾಳವೀಯಾ ನಗರದಲ್ಲಿ ಬುಧವಾರ ಬೆಳಿಗ್ಗೆ ಹೊಟೇಲ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು indiatoday ವರದಿ ಮಾಡಿದೆ.
ಅಗ್ನಿ ಅವಘಡದಿಂದ ಹೊಟೇಲ್‌ನಲ್ಲಿ ಹೊಗೆ ಆವರಿಸಿಕೊಂಡಿದೆ.
ಕಟ್ಟಡದಿಂದ ಹೊರಬರಲು ಜನರು ಪರದಾಡುತ್ತಿರುವುದು ಕಂಡು ಬಂದಿದೆ. ಮೃತರಲ್ಲಿ ವಿದೇಶಿಯರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದವರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ಘಟನಾ ಸ್ಥಳದಿಂದ 37 ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಇಬ್ಬರು ಮಹಿಳೆಯರು ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿಯುವುದು ಕಂಡು ಬಂದಿದೆ.
ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಮತ್ತು AIIMS ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

