HEALTH TIPS

Delhi | ತುಘಲಕಾಬಾದ್ ನಲ್ಲಿ ವಸತಿ ಕಟ್ಟಡಕ್ಕೆ ಬೆಂಕಿ; ಮೂವರು ಮೃತ್ಯು, ಇಬ್ಬರ ಸ್ಥಿತಿ ಗಂಭೀರ

 ನವದೆಹಲಿ: ಆಗ್ನೇಯ ದಿಲ್ಲಿಯ ಗೋವಿಂದಪುರಿ ಪ್ರದೇಶದಲ್ಲಿರುವ ಐದು ಅಂತಸ್ತಿನ ವಸತಿ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


ತುಘಲಕಾಬಾದ್ ಎಕ್ಸ್ಟೆನ್ಶನ್ ನಲ್ಲಿರುವ ಈ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಗಿನ ಜಾವ 2.24ರ ಸುಮಾರಿಗೆ ಗೋವಿಂದಪುರಿ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಬಳಿಕ ಕಟ್ಟಡದೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಹಲವಾರು ನಿವಾಸಿಗಳು ಹೊರಬರಲು ಸಾಧ್ಯವಾಗದೆ ಒಳಗೇ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆಯಲ್ಲಿ ಎಂಟು ಮಂದಿಯನ್ನು ಕಟ್ಟಡದಿಂದ ಸುರಕ್ಷಿತವಾಗಿ ಹೊರತೆಗೆದು ಸಫ್ದರ್ಜಂಗ್ ಆಸ್ಪತ್ರೆ ಹಾಗೂ ಏಮ್ಸ್ ಟ್ರಾಮಾ ಸೆಂಟರ್ ಗೆ ದಾಖಲಿಸಲಾಯಿತು ಎಂದು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಹೇಮಂತ್ ತಿವಾರಿ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಿಸಲಾದವರ ಪೈಕಿ 22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಕಟ್ಟಡದ ನೆಲ ಮಹಡಿಯಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ದಕ್ಷಿಣ ದಿಲ್ಲಿಯ ಮಾಳವೀಯ ನಗರದಲ್ಲಿನ ಹೋಟೆಲ್ ನಲ್ಲಿ ಸಂಭವಿಸಿದ್ದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟ ಘಟನೆ ನಡೆದ ಒಂದು ವಾರದ ಬಳಿಕ ಈ ದುರ್ಘಟನೆ ಸಂಭವಿಸಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries