HEALTH TIPS

Mumbai | ಕಿರುತೆರೆ ನಟಿ ಸಂಚಿತಾ ಉಗಾಲೆ ಆತ್ಮಹತ್ಯೆ

ಮುಂಬೈ: 'ಕುಂಕುಮ್ ಭಾಗ್ಯ' ಮತ್ತು 'ವಾಗ್ಳೆ ಕಿ ದುನಿಯಾ' ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಚಿರಪರಿಚಿತರಾಗಿದ್ದ ಕಿರುತೆರೆ ನಟಿ ಸಂಚಿತಾ ಉಗಾಲೆ (22) ಅವರು ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂಚಿತಾ ರವಿವಾರ ಸಂಜೆ ನಲಸೋಪಾರ ಈಸ್ಟ್ ನ ಆಚೋಲೆ ಗ್ರಾಮದಲ್ಲಿರುವ ಸಾಯಿ ಸಂತೋಷಿ ಬಿಲ್ಡಿಂಗ್ನ ತನ್ನ ನಿವಾಸದಲ್ಲಿ ಸೀರೆಯಿಂದ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕುಟುಂಬದ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ತಕ್ಷಣವೇ ಸಂಚಿತಾರನ್ನು ವಸಾಯಿ-ವಿರಾರ್ ಮುನ್ಸಿಪಲ್ ಆಸ್ಪತ್ರೆಗೆ ಕರೆದೊಯ್ದರಾದರೂ, ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ಸಂಚಿತಾರ ತಂದೆ ಮಚ್ಚೀಂದ್ರ ಉಗಾಲೆ ನೀಡಿದ ದೂರಿನ ಮೇರೆಗೆ ಆಚೋಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries