HEALTH TIPS

NCERT ಪಠ್ಯದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ | ಬಿಜೆಪಿ ಇತಿಹಾಸವನ್ನು ತಿರುಚುತ್ತಿದೆ: ಸಚಿನ್ ಪೈಲಟ್ ಆರೋಪ

ನವದೆಹಲಿ: ಎನ್‌ಸಿಇಆರ್‌ಟಿ ಪಠ್ಯದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಬಿಜೆಪಿ ಸರ್ಕಾರವು ಇತಿಹಾಸವನ್ನು ತಮಗೆ ಅನುಕೂಲವಾಗುವ ರೀತಿಯಲ್ಲಿ ಪ್ರಸ್ತುತಪಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

"ಬಿಜೆಪಿ ಸರ್ಕಾರವು ರಾಜ್ಯದಲ್ಲಾಗಲಿ ಅಥವಾ ಕೇಂದ್ರದಲ್ಲಾಗಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಇತಿಹಾಸವನ್ನು ತಮ್ಮ ದೃಷ್ಟಿಕೋನಕ್ಕೆ ತಕ್ಕಂತೆ ಮಂಡಿಸಲು ಯತ್ನಿಸುತ್ತದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಪ್ರಜಾಪ್ರಭುತ್ವವು ಹಿಂದೆಂದೂ ಇಂತಹ ಸವಾಲನ್ನು ಎದುರಿಸಿರಲಿಲ್ಲ. ಸಾಮಾಜಿಕ ಮಾಧ್ಯಮ, ಮಾಧ್ಯಮ, ನ್ಯಾಯಾಂಗ, ಅಧಿಕಾರಶಾಹಿ ಹಾಗೂ ಚುನಾವಣಾ ಆಯೋಗವನ್ನು ಬಳಸಿಕೊಂಡು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕಲಾಗುತ್ತಿದೆ. ಸರ್ಕಾರವು ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲ ಬಾರಿಗೆ ಕಾಣುತ್ತಿದೆ" ಎಂದು ಅವರು ಹೇಳಿದರು.

ಕಳೆದ 12 ವರ್ಷಗಳ ಬಗ್ಗೆಯೂ ಚರ್ಚೆಯಾಗಲಿ: ಸಂಜಯ್ ರಾವತ್

ಕಾಂಗ್ರೆಸ್ ಮೈತ್ರಿಕೂಟದ ಭಾಗವಾಗಿರುವ ಶಿವಸೇನೆ (ಯುಬಿಟಿ) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

"ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯ ಬಗ್ಗೆಯೂ ಚರ್ಚೆಯಾಗಬೇಕು. ಇಂದಿರಾ ಗಾಂಧಿ ಯಾವುದೇ ರಾಜಕೀಯ ಪಕ್ಷವನ್ನು ಒಡೆಯಲಿಲ್ಲ, ಸಂವಿಧಾನವನ್ನೂ ರದ್ದುಗೊಳಿಸಲಿಲ್ಲ. ತುರ್ತು ಪರಿಸ್ಥಿತಿಯು ಕೇವಲ ಅಧ್ಯಯನದ ವಿಷಯವಲ್ಲ. ಅದಕ್ಕೆ ಸಂವಿಧಾನದಲ್ಲೇ ಅವಕಾಶ ಕಲ್ಪಿಸಲಾಗಿದೆ. ದೇಶದಲ್ಲಿ ಅರಾಜಕತೆ ಉಂಟಾದರೆ ತುರ್ತು ಪರಿಸ್ಥಿತಿ ಘೋಷಿಸುವ ಅಧಿಕಾರವನ್ನು ಸಂವಿಧಾನವೇ ಪ್ರಧಾನಮಂತ್ರಿಗೆ ನೀಡಿದೆ. ಇದರರ್ಥ ಸಂವಿಧಾನವನ್ನು ಗೌರವಿಸುವುದಿಲ್ಲ ಎಂಬುದಲ್ಲ" ಎಂದು ಅವರು ಹೇಳಿದರು.

"ನೋಟು ಅಮಾನ್ಯೀಕರಣವನ್ನು ಏಕೆ ಜಾರಿಗೊಳಿಸಲಾಯಿತು? ಕೋವಿಡ್-19 ಸಾಂಕ್ರಾಮಿಕದ ವೇಳೆ ಕಟ್ಟುನಿಟ್ಟಿನ ನಿರ್ಬಂಧಗಳು ಹಾಗೂ ತುರ್ತು ಕ್ರಮಗಳನ್ನು ಏಕೆ ಕೈಗೊಳ್ಳಲಾಯಿತು? ಈ ಎಲ್ಲ ಕ್ರಮಗಳೂ ಸಂವಿಧಾನ ಮತ್ತು ಕಾನೂನಿನಲ್ಲಿರುವ ನಿಬಂಧನೆಗಳ ಆಧಾರದ ಮೇಲೆಯೇ ಜಾರಿಗೊಂಡವು. ಆದರೆ ಇಂದು ಸಂವಿಧಾನದ ಬಗ್ಗೆ ಮಾತನಾಡುವವರೇ ಅದರ ನೈಜ ಆಶಯವನ್ನು ಗೌರವಿಸುತ್ತಿಲ್ಲ" ಎಂದು ರಾವತ್ ಕಿಡಿಕಾರಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries