HEALTH TIPS

NEET ಮರುಪರೀಕ್ಷೆ: ಭಾರತದಲ್ಲಿ ಜೂ. 22ರವರೆಗೆ Telegram ಆಯಪ್‌ಗೆ ನಿರ್ಬಂಧ

 ನವದೆಹಲಿ: ಜೂನ್‌ 21ರಂದು ನಡೆಯಲಿರುವ NEET(UG)-2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್‌ ಅಪ್ಲಿಕೇಶನ್‌ ಗೆ ಜೂನ್‌ 22ರವರೆಗೆ ನಿರ್ಬಂಧಿಸಲಾಗಿದೆ. 

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 69ಎ ಅಡಿಯಲ್ಲಿ ಈ ಆದೇಶ ಹೊರಡಿಸಿದೆ.

ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ, ಸುಳ್ಳು ಮಾಹಿತಿ ಪ್ರಸಾರ ಹಾಗೂ ಸಂಘಟಿತ ವಂಚನೆ ತಡೆಯುವುದು ಇದರ ಉದ್ದೇಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ, ಈಗಾಗಲೇ ಪೋಸ್ಟ್‌ ಮಾಡಿರುವ ಸಂದೇಶಗಳನ್ನು ನಂತರ ಎಡಿಟ್ ಮಾಡುವ 'ಮೆಸೇಜ್‌ ಎಡಿಟ್‌' ಸೌಲಭ್ಯವನ್ನು ಜೂ. 30ರವರೆಗೆ ಭಾರತದೊಳಗೆ ಸ್ಥಗಿತಗೊಳಿಸುವಂತೆ ಟೆಲಿಗ್ರಾಮ್‌ ಗೆ ಸೂಚಿಸಲಾಗಿದೆ.

ಪರೀಕ್ಷೆ ಮುಗಿದ ಬಳಿಕ ಸಂದೇಶಗಳ ಸಮಯ ಹಾಗೂ ವಿಷಯವನ್ನು ಬದಲಾಯಿಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಭಾವನೆ ಮೂಡಿಸುವ ಸುಳ್ಳು ಪುರಾವೆಗಳನ್ನು ಸೃಷ್ಟಿಸಲು ಈ ಸೌಲಭ್ಯವನ್ನು ಹಿಂದೆ ದುರುಪಯೋಗಪಡಿಸಿಕೊಳ್ಳಲಾಗಿತ್ತು ಎಂದು NTA ಹೇಳಿದೆ.

'NEET ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ವಂಚನಾ ಜಾಲಗಳ ಚಟುವಟಿಕೆಗಳನ್ನು ಮಟ್ಟ ಹಾಕಲು ಈ ಕ್ರಮ ಕೈಗೊಳ್ಳಲಾಗಿದೆ' ಎಂದು ಓಖಿಂ ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್‌ 21ರಂದು ನಡೆಯಲಿರುವ ಮರುಪರೀಕ್ಷೆಯನ್ನು ಸುರಕ್ಷಿತ ಹಾಗೂ ಪಾರದರ್ಶಕವಾಗಿ ನಡೆಸಲು ಈ ಕ್ರಮ ನೆರವಾಗಲಿದೆ ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ.  








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries