HEALTH TIPS

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಆರೋಪಿಗೆ ಮರುಪರೀಕ್ಷೆ ಬರೆಯಲು ದಿಲ್ಲಿ ಕೋರ್ಟ್ ಅನುಮತಿ

ನವದೆಹಲಿ: ಶಿಕ್ಷಣದ ಹಕ್ಕು ಮೂಲಭೂತ ಹಕ್ಕಾಗಿದೆ ಎಂದು ಅಭಿಪ್ರಾಯಪಟ್ಟಿರುವ ದಿಲ್ಲಿ ನ್ಯಾಯಾಲಯವು, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಶ್ ಯಾದವ್‌ಗೆ ನ್ಯಾಯಾಂಗ ಬಂಧನದಲ್ಲಿದ್ದುಕೊಂಡೇ ಮರುಪರೀಕ್ಷೆಗೆ ಹಾಜರಾಗಲು ಮಂಗಳವಾರ ಅನುಮತಿ ನೀಡಿದೆ.

ಇದಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಯಾವುದೇ ಆಕ್ಷೇಪವನ್ನು ವ್ಯಕ್ತಪಡಿಸಿಲ್ಲ ಮತ್ತು ಆರೋಪಿಗೆ ಈಗಾಗಲೇ ಪ್ರವೇಶ ಪತ್ರವನ್ನು ಒದಗಿಸಿದೆ ಎಂದು ನ್ಯಾಯಾಲಯವು ತಿಳಿಸಿದೆ.

ಯಾದವ್ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ ಮರುಪರೀಕ್ಷೆಗೆ ಹಾಜರಾಗಲು ಹಾಗೂ ತನ್ನ ಸೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು 15 ದಿನಗಳ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಇದಕ್ಕೂ ಮುನ್ನ ಜೂನ್ 2 ರಂದು ನ್ಯಾಯಾಲಯವು ನೀಟ್ ಯುಜಿ ಪರೀಕ್ಷೆಯ ತಯಾರಿಗಾಗಿ ಪುಸ್ತಕಗಳನ್ನು ಹೊಂದಲು ಅನುಮತಿ ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿತ್ತು.

ರೌಸ್ ಅವೆನ್ಯೂ ನ್ಯಾಯಾಲಯವು ಯಾದವ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಜೂನ್ 12ರಂದು ನಡೆಸಿತ್ತಾದರೂ,ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries