HEALTH TIPS

NEET ಮರುಪರೀಕ್ಷೆಯಲ್ಲಿ ಮಿಲಿಟರಿ ಶೈಲಿಯ ಭದ್ರತಾ ಕ್ರಮಗಳ ಬಗ್ಗೆ ಅಣ್ಣಾಮಲೈ ಕಳವಳ; ಬಿಜೆಪಿ ತಿರುಗೇಟು

 ಚೆನ್ನೈ: ಜೂನ್ 21ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಮರುಪರೀಕ್ಷೆಗೆ ಜಾರಿಗೊಳಿಸಲಾಗಿರುವ ಮಿಲಿಟಿರಿ ಶೈಲಿಯ ಕಠಿಣ ಭದ್ರತಾ ಕ್ರಮಗಳು ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಹೆಚ್ಚಿಸಬಹುದು ಎಂದು ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. 


ಮೇ ತಿಂಗಳಲ್ಲಿ ನಡೆದಿದ್ದ  NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಇದರಿಂದಾಗಿ ಜೂನ್ 21ರಂದು ಮರುಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಿರ್ಧರಿಸಿದೆ.

ಮರುಪರೀಕ್ಷೆಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸಲು ಭಾರತೀಯ ವಾಯುಪಡೆಯನ್ನು ಬಳಸಲಾಗುತ್ತಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ (ಅಖPಈ) ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಅISಈ) ಸಿಬ್ಬಂದಿ ಸ್ಥಳೀಯ ಪೊಲೀಸರೊಂದಿಗೆ ಸೇರಿ ಭದ್ರತಾ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೋಮೆಟ್ರಿಕ್ ಹಾಗೂ ಮುಖ ಗುರುತಿಸುವಿಕೆ ಪರಿಶೀಲನೆಯನ್ನೂ ನಡೆಸಲಾಗುತ್ತದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅಣ್ಣಾಮಲೈ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕೈಗೊಂಡ ಕ್ರಮಗಳನ್ನು ಸ್ವಾಗತಿಸಿದ್ದಾರೆ. ಆದರೆ ಹೆಚ್ಚುವರಿ ಪರಿಶೀಲನೆ, ವಿಸ್ತೃತ ದೇಹ ತಪಾಸಣೆ (ಫ್ರಿಸ್ಕಿಂಗ್) ಹಾಗೂ ಪರೀಕ್ಷೆಯ ಅವಧಿಯನ್ನು 180 ನಿಮಿಷಗಳಿಂದ 195 ನಿಮಿಷಗಳಿಗೆ ಹೆಚ್ಚಿಸಿರುವುದು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಹೆಚ್ಚಿಸಬಹುದು ಎಂದು ಹೇಳಿದ್ದಾರೆ.

'ಸೋರಿಕೆ ತಡೆಯಲು ಕ್ರಮ ಕೈಗೊಂಡಿರುವುದು ಸರಿಯೇ. ಆದರೆ ಹಲವು ತಿಂಗಳುಗಳಿಂದ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಹೊರೆ ಹಾಕಲಾಗುತ್ತಿದೆ. ಇದು ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುವ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಉದ್ದೇಶಕ್ಕೂ ವಿರುದ್ಧವಾಗಿದೆ' ಎಂದು ಅವರು ಹೇಳಿದ್ದಾರೆ.

ಅಲ್ಲದೆ, ವಿದ್ಯಾರ್ಥಿಗಳು ಪ್ರವೇಶ ಪತ್ರ (ಅಡ್ಮಿಟ್ ಕಾರ್ಡ್) ಡೌನ್ಲೋಡ್ ಮಾಡುವಲ್ಲಿ ತೊಂದರೆ ಅನುಭವಿಸುತ್ತಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಓಖಿಂ, ತಾಂತ್ರಿಕ ಮತ್ತು ಸರ್ವರ್ ಸಮಸ್ಯೆಗಳಿಂದ ಕೆಲ ಅಭ್ಯರ್ಥಿಗಳಿಗೆ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಲು ತೊಂದರೆಯಾಗಿರುವುದನ್ನು ಒಪ್ಪಿಕೊಂಡಿದೆ. ಸಮಸ್ಯೆ ಪರಿಹಾರಕ್ಕೆ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ.

'ಪರೀಕ್ಷೆಗೆ ಇಷ್ಟೊಂದು ಭದ್ರತಾ ವ್ಯವಸ್ಥೆಗಳನ್ನು ರೂಪಿಸಿದ್ದರೂ ಅಡ್ಮಿಟ್ ಕಾರ್ಡ್ ಸಮಸ್ಯೆ ಎದುರಾಗಿದೆ. ಪ್ರಸ್ತುತ ಅನುಸರಿಸುತ್ತಿರುವ ವಿಧಾನವು ಸಮಸ್ಯೆಯನ್ನು ಪರಿಹರಿಸುವ ಬದಲು ಹೊಸ ಸಮಸ್ಯೆಗಳನ್ನು ಸೃಷ್ಟಿಸುವ ಅಪಾಯವಿದೆ' ಎಂದು ಅಣ್ಣಾಮಲೈ ಹೇಳಿದ್ದಾರೆ.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ವಿನೋದ್ ಸೆಲ್ವಂ, ಬಯೋಮೆಟ್ರಿಕ್ ಪರಿಶೀಲನೆ, ಸಿಸಿಟಿವಿ ಮೇಲ್ವಿಚಾರಣೆ ಮತ್ತು ಭದ್ರತಾ ತಪಾಸಣೆ ಯಾವುದೇ ದೊಡ್ಡ ಪ್ರಮಾಣದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಮಾನ್ಯ ಕ್ರಮಗಳಾಗಿವೆ ಎಂದು ಹೇಳಿದ್ದಾರೆ.

'ಚೀನಾದ ಗಾವೊಕಾವೊ ಪರೀಕ್ಷೆಯನ್ನು ಪ್ರತಿವರ್ಷ ಸುಮಾರು 1.3 ಕೋಟಿ ವಿದ್ಯಾರ್ಥಿಗಳು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ ಬರೆಯುತ್ತಾರೆ. ಅದನ್ನು ಯಾರೂ ಮಿಲಿಟರೀಕರಣ ಎಂದು ಕರೆಯುವುದಿಲ್ಲ. ಅದು ಪರೀಕ್ಷೆಯ ವಿಶ್ವಾಸಾರ್ಹತೆಯನ್ನು ಕಾಪಾಡುವ ಕ್ರಮ' ಎಂದು ಅವರು ಹೇಳಿದ್ದಾರೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries