HEALTH TIPS

NEP ಜಾರಿಯಲ್ಲಿ 'ಶ್ಲಾಘನೀಯ ಪ್ರಯತ್ನ': ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಪ್ರಶಂಸಿಸಿದ ಪ್ರಧಾನಿ ಮೋದಿ

 ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನಿರಂತರ ಟೀಕೆಗೆ ಗುರಿಯಾಗುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಗೊಳಿಸುವಲ್ಲಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಪರಿವರ್ತಿಸಲು ಶ್ಲಾಘನೀಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

"ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾರತವನ್ನು ಜ್ಞಾನ, ಕಲಿಕೆ ಮತ್ತು ಹೊಸ ಅವಿಷ್ಕಾರಗಳ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಅವರು ಶ್ಲಾಘನೀಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

NEET ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಲೋಪಗಳ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ನಾಗರಿಕ ಸಮಾಜ ಸಂಸ್ಥೆಗಳ ಟೀಕೆಗೆ ಗುರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಶುಭಾಶಯ ಸಂದೇಶ ಗಮನ ಸೆಳೆದಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಓಇಇಖಿ ಪರೀಕ್ಷೆ ವಿವಾದಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಯಿಂದ ಸಂತ್ರಸ್ತ ಅಭ್ಯರ್ಥಿಗಳಿಗಾಗಿ ರಾಷ್ಟ್ರವ್ಯಾಪಿ ಮರುಪರೀಕ್ಷೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರೀಕ್ಷಾ ಪ್ರಕ್ರಿಯೆಯನ್ನು ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಸುವಲ್ಲಿ ಶಿಕ್ಷಣ ಸಚಿವಾಲಯ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿಫಲವಾಗಿವೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳು, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪದೇ ಪದೇ ಆಗ್ರಹಿಸಿವೆ.

ಸಾರ್ವಜನಿಕ ಪರೀಕ್ಷೆಗಳ ನಿರ್ವಹಣೆಯಲ್ಲಿ ಪದೇ ಪದೇ ವೈಫಲ್ಯ ಉಂಟಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆಗಳು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿವೆ.

ಈ ವಾರದ ಆರಂಭದಲ್ಲಿ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದ ಧರ್ಮೇಂದ್ರ ಪ್ರಧಾನ್, ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಓಇಇಖಿ ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಅವರು ಹೇಳಿದ್ದರು. ಅಲ್ಲದೆ, ದೇಶದ ಸಂಸ್ಥೆಗಳ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುವ ಉದ್ದೇಶದಿಂದ ತಮ್ಮ ರಾಜಕೀಯ ವಿರೋಧಿಗಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದರು.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries