HEALTH TIPS

OSM ವಿವಾದ | CBSE ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ; ತನಿಖಾ ಸಮಿತಿ ರಚನೆ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE)ಯ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ ಸುತ್ತ ಭುಗಿಲೆದ್ದಿರುವ ವಿವಾದದ ಬೆನ್ನಲ್ಲೇ, ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯನ್ನು ಕೇಂದ್ರ ಸರ್ಕಾರ ವರ್ಗಾವಣೆಗೊಳಿಸಿದೆ.

ತೀವ್ರ ಟೀಕೆಗೆ ಗುರಿಯಾಗಿರುವ ಆನ್ ಸ್ಕ್ರೀನ್ ಮಾರ್ಕಿಂಗ್ ಸಿಸ್ಟಮ್ (OSM) ಖರೀದಿಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಪರಿಶೀಲಿಸಲು ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ.

ಆನ್ ಸ್ಕ್ರೀನ್ ಮಾರ್ಕಿಂಗ್ ಸಿಸ್ಟಮ್ ಗೆ ಸಂಬಂಧಿಸಿದಂತೆ ಕೆಲವು ವಿದ್ಯಾರ್ಥಿಗಳು ಹಾಗೂ ಪೋಷಕರು ಕಳವಳ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಉತ್ತರ ಪತ್ರಿಕೆಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆ ವೇಳೆ ಎದುರಾದ ತಾಂತ್ರಿಕ ಸಮಸ್ಯೆಗಳು, ಪಾವತಿ ವೈಫಲ್ಯಗಳು ಹಾಗೂ ಪೋರ್ಟಲ್ಗೆ ಪ್ರವೇಶ ಪಡೆಯುವಲ್ಲಿ ಉಂಟಾದ ತೊಂದರೆಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷಾ ಮಂಡಳಿಯ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದರು.

ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯ ಕಾರ್ಯನಿರ್ವಹಣೆ ಹಾಗೂ OSM ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ತನಿಖಾ ಸಮಿತಿ ಪರಿಶೀಲಿಸಲಿದೆ ಎಂದು ಮೂಲಗಳು ತಿಳಿಸಿವೆ.

OSM ವ್ಯವಸ್ಥೆಯ ಅನುಷ್ಠಾನ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗೆ ಸಂಬಂಧಿಸಿದ ದೂರುಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries