HEALTH TIPS

RTI ಚಟುವಟಿಕೆ ಹೊಸ ದಂಧೆಯಾಗಿದೆ: ಸುಪ್ರೀಂ ಕೋರ್ಟ್

 ನವದೆಹಲಿ: ರಸ್ತೆ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗೆ ಅಡ್ಡಿಯನ್ನುಂಟು ಮಾಡಿದ ಆರೋಪ ಎದುರಿಸುತ್ತಿರುವ ಖಖಿI ಕಾರ್ಯಕರ್ತನಿಗೆ ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. 


ಖಖಿI ಕಾರ್ಯಕರ್ತ ರಾಕೇಶ್ ಕುಮಾರ್ ಬೆಹ್ಲ್ ಅವರಿಗೆ ಜಾಮೀನು ನಿರಾಕರಿಸಿದ ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯಿ ಅವರ ಪೀಠವು, ಖಖಿI ಚಟುವಟಿಕೆ ಎನ್ನುವುದು ಇಂದು ಹೊಸದೊಂದು ದಂಧೆಯಾಗಿ ಮಾರ್ಪಟ್ಟಿದೆ ಎಂದು ತರಾಟೆಗೆತ್ತಿಕೊಂಡಿತು.

ಖಖಿI ಕಾರ್ಯಕರ್ತರು ಹೊಸದೊಂದು ಉದ್ಯಮವನ್ನು ಸೃಷ್ಟಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಿದೆ, ರಸ್ತೆ ನಿರ್ಮಾಣದ ಜವಾಬ್ದಾರಿಯನ್ನು ಅದು ನೋಡಿಕೊಳ್ಳುತ್ತದೆ. ಇದರಲ್ಲಿ ಮಧ್ಯಪ್ರವೇಶಿಸಲು ನೀವ್ಯಾರು? ಹೆಸರಿಗಷ್ಟೇ ಖಖಿI ಕಾರ್ಯಕರ್ತರು! ಇದೊಂದು ರೀತಿಯ ಪೀತ ಪತ್ರಿಕೋದ್ಯಮ. ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾ. ಮೆಹ್ತಾ ಹೇಳಿದರು.

ಈ ಎಲ್ಲ ರಸ್ತೆ ನಿರ್ಮಾಣದ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ನೀವ್ಯಾರು? ನೀವೇನಾದರೂ ಮೇಲಧಿಕಾರಿಯೇ ಎಂದು ನ್ಯಾ. ಬಿಷ್ಣೋಯಿ ಪ್ರಶ್ನಿಸಿದರು.

ಅರ್ಜಿದಾರರು ತನಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಬೆಹ್ಲ್ ಮತ್ತೊಬ್ಬ ಆರೋಪಿಯೊಂದಿಗೆ ಸೇರಿ ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಿಪಡಿಸಿದ್ದಾರೆ ಮತ್ತು ಕಾಮಗಾರಿಯ ಉಸ್ತುವಾರಿ ವಹಿಸಿದ್ದ ದೂರುದಾರರಿಗೆ ಹಾಗೂ ಸ್ಥಳದಲ್ಲಿದ್ದ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಅರ್ಜಿದಾರರು ದೂರುದಾರರ ಮೇಲೆ ಹಲ್ಲೆ ನಡೆಸಿದ್ದು, ಮತ್ತೊಬ್ಬ ಆರೋಪಿ ಒದ್ದಿದ್ದಾನೆ ಎಂದು ಆರೋಪಿಸಲಾಗಿದೆ.

ಕಾರ್ಮಿಕರ ವಿರುದ್ಧ ಜಾತಿ ನಿಂದನೆ ಆರೋಪವನ್ನೂ ಅವರು ಎದುರಿಸುತ್ತಿದ್ದಾರೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries