HEALTH TIPS

ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ - ಅತ್ಯಾಚಾರ ಆರೋಪಿಗಳಿಗೆ ಜಾಮೀನು: UP ಸಿಎಂ ಮಧ್ಯಪ್ರವೇಶಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ

 ಪ್ರಯಾಗರಾಜ್:  ಉತ್ತರ ಪ್ರದೇಶದ ವಿಧಿವಿಜ್ಞಾನ ಪ್ರಯೋಗಾಲಯಗಳ (ಈSಐ) ಅಪೂರ್ಣ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಮತ್ತು ಹಳೆಯ ಯಂತ್ರೋಪಕರಣಗಳಿಂದಾಗಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಸಿಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.


ರಾಜ್ಯದ ಈSಐಗಳಲ್ಲಿ ಉನ್ನತ ಮಟ್ಟದ ಯಂತ್ರೋಪಕರಣಗಳು ಮತ್ತು ಅಗತ್ಯ ಸಿಬ್ಬಂದಿಯನ್ನು ಒದಗಿಸುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಬೇಕು ಎಂದು ನ್ಯಾಯಾಲಯ ಹೇಳಿದ್ದು, ಈ ಸಂಬಂಧದ ಆದೇಶದ ಪ್ರತಿಯನ್ನು ಮುಖ್ಯ ಕಾರ್ಯದರ್ಶಿ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಳುಹಿಸುವಂತೆ ನಿರ್ದೇಶಿಸಿದೆ.

ಅತ್ಯಾಚಾರ ಎಸಗಿ ಬಳಿಕ ಮಹಿಳೆಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿ ಅರುಣ್ ಕುಮಾರ್ ಸಿಂಗ್ ದೇಶ್ವಾಲ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಯೋನಿ ಸ್ವ್ಯಾಬ್ ಹಾಗೂ ಆರೋಪಿಗಳ ಆಓಂ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ, ಹೆಚ್ಚಿನ ಪ್ರಕರಣಗಳಲ್ಲಿ ಆಓಂ ಪ್ರೊಫೈಲ್ ಸಮರ್ಪಕವಾಗಿ ಸಿದ್ಧವಾಗದ ಕಾರಣ ಯೋನಿ ಸ್ವ್ಯಾಬ್‌ನಲ್ಲಿ ಪತ್ತೆಯಾದ ಆಓಂ ಯಾರದ್ದು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆಯಲ್ಲಿದ್ದ ಪ್ರಕರಣದಲ್ಲಿಯೂ ಮೃತಪಟ್ಟ ಮಹಿಳೆಯ ಯೋನಿ ಸ್ಮೀಯರ್‌ ನಲ್ಲಿ ಪತ್ತೆಯಾದ ಡಿಎನ್‌ಎ ಆರೋಪಿಯದ್ದೇ ಎಂಬುದನ್ನು ಈSಐ ವರದಿ ದೃಢಪಡಿಸಿಲ್ಲ. ಹೀಗಾಗಿ, ಗಂಭೀರ ಆರೋಪವಿದ್ದರೂ ವೈಜ್ಞಾನಿಕ ಪುರಾವೆಗಳ ಕೊರತೆಯಿಂದ ಆರೋಪಿಗೆ ಜಾಮೀನು ನೀಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

"ಸರಿಯಾದ ವೈಜ್ಞಾನಿಕ ಪುರಾವೆಗಳ ಕೊರತೆಯಿಂದ ಈ ನ್ಯಾಯಾಲಯವು ಭಾರವಾದ ಹೃದಯ ಮತ್ತು ತೀವ್ರ ನೋವಿನಿಂದ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲೇಬೇಕಾಗಿದೆ" ಎಂದು ನ್ಯಾಯಪೀಠ ಹೇಳಿದೆ.

ಆಓಂ ಪ್ರೊಫೈಲ್ ಸಿದ್ಧಗೊಳಿಸುವಲ್ಲಿನ ವೈಫಲ್ಯಕ್ಕೆ ಈSಐಗಳ ಅಪೂರ್ಣ ಮೂಲಸೌಕರ್ಯ ಮತ್ತು ಹಳೆಯ ಯಂತ್ರೋಪಕರಣಗಳೇ ಕಾರಣ. ಈ ಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಉತ್ತರ ಪ್ರದೇಶದ ಬಹುತೇಕ ವಿಧಿವಿಜ್ಞಾನ ಪ್ರಯೋಗಾಲಯಗಳು ತೀವ್ರ ಸಿಬ್ಬಂದಿ ಕೊರತೆ ಮತ್ತು ಮೂಲಸೌಕರ್ಯ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಈSಐ ನಿರ್ದೇಶಕರು ಇತ್ತೀಚೆಗೆ ತಿಳಿಸಿರುವುದನ್ನೂ ನ್ಯಾಯಪೀಠ ಉಲ್ಲೇಖಿಸಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries