ಕರಾಚಿ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪಾಕಿಸ್ತಾನದ ಸೇನಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಜತೆಗೆ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್‌ಗಳನ್ನು ಬಂಧಿಸಲಾಗಿದೆ.
ಗುಪ್ತಚರ ಮಾಹಿತಿ ಆಧರಿಸಿ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೇನೆ ಬುಧವಾರ ತಿಳಿಸಿದೆ.
ಕಾರ್ಯಾಚರಣೆ ವೇಳೆ ಮದ್ದುಗುಂಡುಗಳು ಮತ್ತು ಕಚ್ಚಾಬಾಂಬ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಿದೆ.

