ನವದೆಹಲಿ: ಪರೀಕ್ಷಾ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿಯು (ಸಿಜೆಪಿ) ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ 18ನೇ ದಿನಕ್ಕೆ ಕಾಲಿರಿಸಿದೆ.
ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಉಪವಾಸ ಸತ್ಯಾಗ್ರಹ 10 ದಿನಗಳನ್ನು ಪೂರೈಸಿದೆ.
'ವಾಂಗ್ಚೂಕ್ ಅವರ ದೇಹದ ತೂಕ 6 ಕೆ.ಜಿಯಷ್ಟು ಕಡಿಮೆಯಾಗಿದೆ. ಅವರ ರಕ್ತದೊತ್ತಡ ಕಡಿಮೆಯಾಗಿದೆ. ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ 'ಎಕ್ಸ್'ನಲ್ಲಿ ಪ್ರಶ್ನಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿಯೋಗವು ಮಂಗಳವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನಕಾರರನ್ನು ಭೇಟಿಯಾಗಿ ಬೆಂಬಲ ಸೂಚಿಸಿತು.

