HEALTH TIPS

ಸಹಪಾಠಿಗಳಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ : 10 ಮಂದಿ ವಿರುದ್ಧ ಪ್ರಕರಣ ದಾಖಲು

 ತಿರುವನಂತಪುರಂ : ತಾನು ಕಳೆದ ಕೆಲವು ತಿಂಗಳುಗಳಿಂದ ಹಲವು ಸಹಪಾಠಿಗಳಿಂದಲೇ ನಿರಂತರ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಕೇರಳದ 13 ವರ್ಷದ ವಿದ್ಯಾರ್ಥಿನಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. 


ಪೊಲೀಸರ ಪ್ರಕಾರ, ಈ ಘಟನೆ ಈ ವರ್ಷದ ಮೇ ತಿಂಗಳಲ್ಲಿ ಶಾಲೆಯ ಆವರಣ, ಆರೋಪಿ ಬಾಲಕಿಯೊಬ್ಬಳ ಮನೆ ಮತ್ತು ಶಾಲೆಯ ಶೌಚಾಲಯ ಸೇರಿದಂತೆ ಹಲವು ಸ್ಥಳಗಳಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಓರ್ವ ಬಾಲಕಿ ಸೇರಿದಂತೆ ಒಟ್ಟು 10 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಇವರಲ್ಲಿ ಆರು ಮಂದಿ ಅಪ್ರಾಪ್ತರು.

ಶಾಲೆಯಲ್ಲಿ ನಡೆಸಲಾದ ಆಪ್ತ ಸಮಾಲೋಚನೆ ಸಂದರ್ಭ ಬಾಲಕಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಬಳಿಕ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅನಂತರ ಈ ವಿಷಯವನ್ನು ಚೈಲ್ಡ್‌ಲೈನ್ ಅಧಿಕಾರಿಗಳಿಗೆ ವರದಿ ಮಾಡಲಾಯಿತು. ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಬಾಲಕಿಯ ಹೇಳಿಕೆ ಆಧಾರದಲ್ಲಿ ತನಿಖಾಧಿಕಾರಿಗಳು ಈ ಆರೋಪದ ಕುರಿತು ತನಿಖೆ ಆರಂಭಿಸಿದ್ದಾರೆ.

ಸುಮಾರು ಒಂದೂವರೆ ವರ್ಷದ ಹಿಂದೆ ಇದೇ ಪ್ರದೇಶದಿಂದ ವರದಿಯಾಗಿದ್ದ ಮತ್ತೊಂದು ಲೈಂಗಿಕ ಕಿರುಕುಳದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಏನಾದರೂ ಸಂಬಂಧವಿದೆಯೇ ಎಂಬ ಆಯಾಮದಲ್ಲೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಭಾಗವಾಗಿ ಎಲ್ಲಾ ಸಂಭಾವ್ಯ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮ ವರದಿಗಳನ್ನು ಗಮನಕ್ಕೆ ತೆಗೆದುಕೊಂಡಿರುವ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ, ಘಟನೆ ಮತ್ತು ತನಿಖೆಯ ಪ್ರಗತಿ ಕುರಿತು ಪೊಲೀಸರಿಂದ ವಿವರವಾದ ವರದಿ ಕೇಳಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries